ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ ಗುಡ್ ನ್ಯೂಸ್

Updated on: Jan 31, 2026 | 11:54 AM

T20 World Cup 2026: ಟಿ20 ವಿಶ್ವಕಪ್ ಟೂರ್ನಿಯು ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಗಾಗಿ 15 ಸದಸ್ಯರುಗಳ ಬಲಿಷ್ಠ ಭಾರತ ತಂಡವನ್ನು ರೂಪಿಸಲಾಗಿದೆ.

1 / 6
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ದಿನಗಳು ಮಾತ್ರ. ಫೆಬ್ರವರಿ 7 ರಿಂದ ಶುರುವಾಗಲಿರುವ ಈ ಟೂರ್ನಿಗೂ ಮುನ್ನ ಭಾರತ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ಅದು ಸಹ ಆಟಗಾರರಿಬ್ಬರ ಫಿಟ್​ನೆಸ್ ಕುರಿತಾಗಿ ಎಂಬುದು ವಿಶೇಷ.

2 / 6
ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದ ತಿಲಕ್ ವರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಇತ್ತೀಚೆಗೆ ಗಾಯಗೊಂಡಿದ್ದರು. ಈ ಗಾಯದ ಕಾರಣ ಇಬ್ಬರು ಆಟಗಾರರು ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಇವರಿಬ್ಬರು ಗಾಯದಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

3 / 6
ವಿಜಯ ಹಝಾರೆ ಪಂದ್ಯದ ವೇಳೆ ವೃಷಣ ತಿರುಚುವಿಕೆಯಿಂದಾಗಿ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದ ತಿಲಕ್ ವರ್ಮಾ ಕಳೆದ ವಾರ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ಫಿಟ್​ನೆಸ್ ಟೆಸ್ಟ್​ನಲ್ಲಿ ಪಾಸಾದ ಬೆನ್ನಲ್ಲೇ ತಿಲಕ್ ವರ್ಮಾ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.

4 / 6
ಮತ್ತೊಂದೆಡೆ ಪೆಕ್ಕೆಲುಬಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ವಾಷಿಂಗ್ಟನ್ ಸುಂದರ್ ಸಹ ಚೇತರಿಸಿಕೊಂಡಿದ್ದಾರೆ. ಅಲ್ಲದೆ ಇದೀಗ ಬ್ಯಾಟಿಂಗ್ ಅಭ್ಯಾಸವನ್ನು ಆರಂಭಿಸಿದ್ದಾರೆ. ಇನ್ನು ಬೌಲಿಂಗ್ ಅಭ್ಯಾಸಗಳೊಂದಿಗೆ ಅವರು ಎನ್​ಸಿಎ ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದರಂತೆ ಫೆಬ್ರವರಿ 4, 2026 ರಂದು ವಾಷಿಂಗ್ಟನ್ ಸುಂದರ್​ ಅವರ ಫಿಟ್​ನೆಸ್ ಮೌಲ್ಯಮಾಪನ ನಡೆಯಲಿದ್ದು, ಇದಾದ ಬಳಿಕ ಅವರು ಸಹ ಭಾರತ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ. 

5 / 6
ಅಂದರೆ ತಿಲಕ್ ವರ್ಮಾ ಹಾಗೂ ವಾಷಿಂಗ್ಟನ್ ಸುಂದರ್ ಸಂಪೂರ್ಣ ಚೇತರಿಸಿಕೊಂಡಿದ್ದು, ಇನ್ನು ಫಿಟ್​​ನೆಸ್ ಟೆಸ್ಟ್​ನಲ್ಲಿ ಪಾಸಾದರೆ ಟೀಮ್ ಇಂಡಿಯಾವನ್ನು ಸೇರಿಕೊಳ್ಳಬಹುದು. ಹೀಗಾಗಿ ಸುಂದರ್ ಹಾಗೂ ತಿಲಕ್ ವರ್ಮಾ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದಾಗಿದೆ.

6 / 6
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.