- Kannada News Photo gallery Cricket photos T20 World Cup 2026: Will Jacks was awarded the Player of the Match award
ಇಬ್ಬರು ಅರ್ಧಶತಕ ಬಾರಿಸಿದರೂ, ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್ಗೆ..!
England vs Nepal: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ 5ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ನೇಪಾಳ ತಂಡವು 20 ಓವರ್ಗಳಲ್ಲಿ 180 ರನ್ಗಳಿಸಿ 4 ರನ್ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.
Updated on: Feb 09, 2026 | 8:56 AM

ಟಿ20 ವಿಶ್ವಕಪ್ನ 5ನೇ ಪಂದ್ಯದಲ್ಲಿ ನೇಪಾಳ ವಿರುದ್ಧ ಇಂಗ್ಲೆಂಡ್ ತಂಡ ರೋಚಕ ಜಯ ಸಾಧಿಸಿದೆ. ಅದು ಸಹ ಕೇವಲ 4 ರನ್ಗಳ ಅಂತರದಿಂದಓ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 35 ಎಸೆತಗಳಲ್ಲಿ 55 ರನ್ ಬಾರಿಸಿದ್ದರು.

ಇದಾದ ಬಳಿಕ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಹ್ಯಾರಿ ಬ್ರೂಕ್ 32 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ ವಿಲ್ ಜಾಕ್ಸ್ 18 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 1 ಫೋರ್ನೊಂದಿಗೆ ಅಜೇಯ 39 ರನ್ ಚಚ್ಚಿದರು. ಈ ಮೂಲಕ 20 ಓವರ್ಗಳಲ್ಲಿ ಇಂಗ್ಲೆಂಡ್ 184 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ನೇಪಾಳ ತಂಡವು ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ 19 ಓವರ್ಗಳಲ್ಲಿ 175 ರನ್ ಕಲೆಹಾಕಿದ್ದರು. ಅದರಂತೆ ಅಂತಿಮ ಓವರ್ನಲ್ಲಿ 10 ರನ್ಗಳ ಅವಶ್ಯಕತೆಯಿತ್ತು. ಈ ವೇಳೆ ಕರಾರುವಾಕ್ ದಾಳಿ ಸಂಘಟಿಸಿದ ಸ್ಯಾಮ್ ಕರನ್ ಕೇವಲ 5 ರನ್ ಮಾತ್ರ ನೀಡುವ ಮೂಲಕ ಇಂಗ್ಲೆಂಡ್ ತಂಡಕ್ಕೆ 4 ರನ್ಗಳ ರೋಚಕ ಜಯ ತಂದು ಕೊಟ್ಟರು.

ಈ ಪಂದ್ಯದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ವಿಲ್ ಜಾಕ್ಸ್ಗೆ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ ಹಾಗೂ ಹ್ಯಾರಿ ಬ್ರೂಕ್ ಸ್ಫೋಟಕ ಅರ್ಧಶತಕ ಬಾರಿಸಿದ್ದರೂ ಜಾಕ್ಸ್ ಅವರನ್ನು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.

ಇದಕ್ಕೆ ಮುಖ್ಯ ಕಾರಣ ವಿಲ್ ಜಾಕ್ಸ್ ಅವರ ಸ್ಟ್ರೈಕ್ ರೇಟ್. ಅಂತಿಮ ಹಂತದಲ್ಲಿ ಬ್ಯಾಟ್ ಬೀಸಿದ್ದ ಜಾಕ್ಸ್ 216.67 ಸ್ಟ್ರೈಕ್ ರೇಟ್ನಲ್ಲಿ ಅಜೇಯ 39 ರನ್ ಚಚ್ಚಿದ್ದರು. ಅಷ್ಟೇ ಅಲ್ಲದೆ 2 ಓವರ್ಗಳಲ್ಲಿ 17 ರನ್ ನೀಡಿ 1 ವಿಕೆಟ್ ಅನ್ನು ಸಹ ಕಬಳಿಸಿದ್ದರು. ಅಂದರೆ ಇಲ್ಲಿ ಸ್ಟ್ರೈಕ್ ರೇಟ್ ಹಾಗೂ ವಿಕೆಟ್ ಅನ್ನು ಪರಿಗಣನೆ ತೆಗೆದುಕೊಳ್ಳುವ ಮೂಲಕ 39 ರನ್ ಗಳಿಸಿದ ವಿಲ್ ಜಾಕ್ಸ್ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ.
