AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ

Abhishek Sharma Illness: ನಮೀಬಿಯಾ ವಿರುದ್ಧದ ಪಂದ್ಯದಿಂದ ಅಭಿಷೇಕ್ ಶರ್ಮಾ ಹೊರಗುಳಿದಿದ್ದು, ಮುಂದಿನ ಪಾಕಿಸ್ತಾನ ಪಂದ್ಯಕ್ಕೂ ಅನುಮಾನ ವ್ಯಕ್ತವಾಗಿದೆ. ಸೂರ್ಯಕುಮಾರ್ ಯಾದವ್ ಈ ವಿಚಾರವನ್ನು ಖಚಿತಪಡಿಸಿದ್ದು, ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಅಭಿಷೇಕ್ ಉತ್ತಮ ಫಾರ್ಮ್​ನಲ್ಲಿದ್ದು, ಅವರ ಅನುಪಸ್ಥಿತಿಯು ಟಿ20 ವಿಶ್ವಕಪ್‌ನಲ್ಲಿ ಭಾರತದ ಪ್ಲೇಯಿಂಗ್ 11 ಮೇಲೆ ಪರಿಣಾಮ ಬೀರಲಿದೆ.

ಪೃಥ್ವಿಶಂಕರ
|

Updated on: Feb 12, 2026 | 7:33 PM

Share
2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಎರಡನೇ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾ, ಟೂರ್ನಿಯ 18ನೇ ಪಂದ್ಯದಲ್ಲಿ ನಮೀಬಿಯಾ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ನಮೀಬಿಯಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಇದಾದ ಬಳಿಕ ತಂಡದ ಪ್ಲೇಯಿಂಗ್ 11 ಬಗ್ಗೆ ಮಾತನಾಡಿದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅಭಿಮಾನಿಗಳು ಆತಂಕ ಪಡುವಂತಹ ವಿಚಾರವೊಂದನ್ನು ಹಂಚಿಕೊಂಡಿದ್ದಾರೆ.

1 / 5
ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ. ಅದರಂತೆ ಅನಾರೋಗ್ಯದಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಹಾಗೂ ಮೊಹಮ್ಮದ್ ಸಿರಾಜ್ ಈ ಪಂದ್ಯದಿಂದ ಹೊರಬಿದ್ದಿದ್ದರೆ, ಅವರ ಬದಲಿಯಾಗಿ ಸಂಜು ಸ್ಯಾಮ್ಸನ್ ಹಾಗೂ ಜಸ್ಪ್ರೀತ್ ಬುಮ್ರಾ ತಂಡವನ್ನು ಕೂಡಿಕೊಂಡಿದ್ದಾರೆ.

2 / 5
ಇದರ ನಡುವೆ ಟಾಸ್ ಸಮಯದಲ್ಲಿ ಸೂರ್ಯ ನೀಡಿದ ಹೇಳಿಕೆ ಅಭಿಮಾನಿಗಳನ್ನು ಆತಂಕಗೊಳಿಸಿದೆ. ಅಷ್ಟಕ್ಕೂ ಸೂರ್ಯ ಹೇಳಿದ್ದೇನೆಂದರೆ, ಅನಾರೋಗ್ಯಕ್ಕೆ ತುತ್ತಾಗಿರುವ ಅಭಿಷೇಕ್ ಶರ್ಮಾ ನಮೀಬಿಯಾ ವಿರುದ್ಧ ಆಡುತ್ತಿಲ್ಲ, ಅವರು ಒಂದು ಅಥವಾ ಎರಡು ಪಂದ್ಯಗಳನ್ನು ತಪ್ಪಿಸಿಕೊಳ್ಳಬಹುದು ಎಂದರು. ಇದರರ್ಥ ಅಭಿಷೇಕ್ ಮುಂದಿನ ಪಂದ್ಯವನ್ನು ಆಡುವುದು ಅನುಮಾನವಾಗಿದೆ.

3 / 5
ಸೂರ್ಯಕುಮಾರ್ ಹೇಳಿದಂತೆ ಅಭಿಷೇಕ್ ಶರ್ಮಾ ಮುಂದಿನ ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೆ, ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಗೈರಾಗಲಿದ್ದಾರೆ. ಇದು ತಂಡಕ್ಕೆ ದೊಡ್ಡ ಹೊಡೆತವಾಗಲಿದೆ. ಏಕೆಂದರೆ ಅಭಿಷೇಕ್ ಅದ್ಭುತ ಫಾರ್ಮ್​ನಲ್ಲಿದ್ದರು. ಮತ್ತು ಪಾಕಿಸ್ತಾನದಂತಹ ತಂಡವನ್ನು ಎದುರಿಸುವಾಗ ಅಭಿಷೇಕ್​ರಂತಹ ಬ್ಯಾಟ್ಸ್‌ಮನ್​ನ ಅಗತ್ಯತೆ ತಂಡಕ್ಕೆ ಹೆಚ್ಚಿತ್ತು.

4 / 5
ಭಾರತ ತಂಡ ಮುಂದಿನ ಪಂದ್ಯ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಇನ್ನು ಮೂರು ದಿನಗಳ ಸಮಯಾವಕಾಶವಿದ್ದು ಅಭಿಷೇಕ್ ಅಷ್ಟರೊಳಗೆ ಗುಣಮುಖರಾಗಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ. ವಾಸ್ತವವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಭಿಷೇಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್​ ಆಗಿದ್ದು ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಅವರು ಇನ್ನು ಪೂರ್ಣವಾಗಿ ಫಿಟ್ ಆಗಿಲ್ಲ ಎಂಬುದು ಮ್ಯಾನೇಜ್​ಮೆಂಟ್ ನಿರ್ಧಾರವಾಗಿದೆ.

5 / 5
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ

ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ

ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ

ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ

ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ

ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ

ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ

ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ