- Kannada News Photo gallery Cricket photos T20 World Cup Many Indian fans turned up to watch Team India nets before start India vs Pakistan Match
IND vs PAK: ಟೀಮ್ ಇಂಡಿಯಾ ಆಟಗಾರರ ಅಭ್ಯಾಸ ನೋಡಲೆಂದೇ ಮೆಲ್ಬೋರ್ನ್ನಲ್ಲಿ ಮುಗಿಬಿದ್ದ ಅಭಿಮಾನಿಗಳು: ಫೋಟೋ
India vs Pakistan, T20 World Cup 2022: ಭಾರತ- ಪಾಕಿಸ್ತಾನ ಪಂದ್ಯ ಆರಂಭಕ್ಕೆ ಕೆಲ ಗಂಟೆಗಳಿರುವಾಗ ಟೀಮ್ ಇಂಡಿಯಾ ಪ್ಲೇಯರ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಭಾರತೀಯ ಆಟಗಾರರ ಅಭ್ಯಾಸ ನೋಡಲೆಂದೇ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಹೊರಗಡೆ ನಿತ್ತಿರುವುದು ಕಂಡುಬಂತು.
Updated on:Oct 23, 2022 | 10:01 AM

ಐಸಿಸಿ ಟಿ20 ವಿಶ್ವಕಪ್ನ (T20 World Cup) ಸೂಪರ್ 12 ಹಂತದ ಪಂದ್ಯಗಳು ಶುರುವಾಗಿದ್ದು ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಮುಖಾಮುಖಿ ಆಗಲಿದೆ. ಮೆಲ್ಬೋರ್ನ್ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಪಂದ್ಯ ಆರಂಭಕ್ಕೆ ಕೆಲ ಗಂಟೆಗಳಿರುವಾಗ ಟೀಮ್ ಇಂಡಿಯಾ ಪ್ಲೇಯರ್ಸ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಭಾರತೀಯ ಆಟಗಾರರ ಅಭ್ಯಾಸ ನೋಡಲೆಂದೇ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಹೊರಗಡೆ ನಿತ್ತಿರುವುದು ಕಂಡುಬಂತು.

ಭಾರತಕ್ಕೆ ಇದೊಂದು ಸೇಡಿನ ಪಂದ್ಯ ಎಂದುಕೂಡ ಹೇಳಬಹುದು. ಯಾಕೆಂದರೆ ಕಳೆದ ವರ್ಷ ದುಬೈನಲ್ಲಿ ನಡೆದಿದ್ದ ಟಿ20 ವಿಶ್ವಕಪ್ 2021ರ ಪಂದ್ಯದಲ್ಲ ಪಾಕಿಸ್ತಾನ ವಿರುದ್ಧ ಭಾರತ ಸೋತಿತ್ತು.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಬಲಿಷ್ಠ ಆಟಗಾರರನ್ನು ಕಣಕ್ಕಿಳಿಸುವ ಯೋಜನೆ ಮಾಡಿರುವ ಕೋಚ್ ಹಾಗೂ ನಾಯಕ ಹಿರಿಯ, ಕಿರಿಯ ಎಂದು ನೋಡದೆ ಫಾರ್ಮ್ನಲ್ಲಿರುವ ಪ್ಲೇಯರ್ಸ್ಗೆ ಮಣೆ ಹಾಕಲು ಮುಂದಾಗಿದ್ದಾರೆ.

ಭಾರತದ ಟಾಪ್ 4 ಖಚಿತವಾಗಿದೆ. ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದರೆ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನದಲ್ಲಿ ಆಡಲಿದ್ದಾರೆ.

ವಿಕೆಟ್ ಕೀಪರ್, ಬ್ಯಾಟರ್ ಆಗಿರುವ ದಿನೇಶ್ ಕಾರ್ತಿಕ್ ಅಥವಾ ರಿಷಭ್ ಪಂತ್ ಪೈಕಿ ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ. ಮೂಲಗಳ ಪ್ರಕಾರ ಪಂತ್ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಫಾರ್ಮ್ನಲ್ಲಿ ಇಲ್ಲದ ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಜೊತೆಗೆ ಅಕ್ಷರ್ ಪಟೇಲ್ ವಹಿಸಲಿದ್ದಾರೆ. ಮತ್ತೊಬ್ಬ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಥವಾ ಯುಜ್ವೇಂದ್ರ ಚಹಲ್ ಇರಲಿದ್ದಾರೆ. ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಪ್ರಮುಖ ವೇಗಿಗಳಾದರೆ ಮತ್ತೊಬ್ಬ ವೇಗಿಯಾಗಿ ಹರ್ಷಲ್ ಪಟೇಲ್ ಅಥವಾ ಅರ್ಶ್ದೀಪ್ ಸಿಂಗ್ ಆಯ್ಕೆಯಾಗಲಿದ್ದಾರೆ.

ಇನ್ನು ಮೆಲ್ಬೋರ್ನ್ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಭಾನುವಾರ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನದ ಹೊತ್ತಿಗೆ ಮೆಲ್ಬೋರ್ನ್ನಲ್ಲಿ ಮಳೆಯ ಸೂಚನೆಯಿಲ್ಲ. ಸಂಜೆ ವೇಳೆಗೆ ಕೊಂಚ ಮಳೆ ಆಗಬಹುದು ಎಂದು ಹೇಳಲಾಗಿದೆ. ಈಗೀನ ಸ್ಥಿತಿ ನೋಡಿದರೆ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1:30ಕ್ಕೆ ಪಂದ್ಯ ಆರಂಭವಾಗುವುದು ಖಚಿತವಾಗಿದೆ.
Published On - 10:01 am, Sun, 23 October 22




