- Kannada News Photo gallery Cricket photos India vs England T20 WC Semi-Final Showdown Looms; Pakistan's Crucial Match Explained
T20 World Cup: ವಿಂಡೀಸ್ ವಿರುದ್ಧ ಭಾರತ ಗೆದ್ದರೆ ಸೆಮಿಫೈನಲ್ ಎದುರಾಳಿ ಇಂಗ್ಲೆಂಡ್
T20 World Cup semi-final: ಇಂಗ್ಲೆಂಡ್ ಗೆಲುವಿನಿಂದ ಟಿ20 ವಿಶ್ವಕಪ್ ಸೆಮಿಫೈನಲ್ ಚಿತ್ರಣ ಸ್ಪಷ್ಟವಾಗುತ್ತಿದೆ. ಪಾಕಿಸ್ತಾನದ ಅರ್ಹತೆ ನೆಟ್ ರನ್ ರೇಟ್ ಮೇಲೆ ಅವಲಂಬಿತವಾಗಿದೆ. ಭಾರತ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ್ನು ಎದುರಿಸುವ ಸಾಧ್ಯತೆಯಿದೆ. ಈ ಮಹತ್ವದ ಪಂದ್ಯ ಮುಂಬೈನಲ್ಲಿ ನಡೆಯುವ ನಿರೀಕ್ಷೆಯಿದೆ. ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಸೆಮಿಫೈನಲ್‌ನಲ್ಲಿ ಸಮಾನ ವಿಜಯ ಇತಿಹಾಸವಿದೆ.
Updated on: Feb 28, 2026 | 7:00 PM

ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಇಂಗ್ಲೆಂಡ್ ತಂಡ ಅಜೇಯವಾಗಿ ಸೆಮಿಫೈನಲ್ಗೇರಿದೆ. ಇಂಗ್ಲೆಂಡ್ ಗೆಲುವಿನೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಕನಸು ಕೂಡ ಜೀವಂತವಾಗಿದೆ. ಇದೀಗ ಶ್ರೀಲಂಕಾ ವಿರುದ್ಧ ನಡೆಯಲಿರುವ ಕೊನೆಯ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ಉತ್ತಮ ನೆಟ್ ರನ್ರೇಟ್ನಿಂದ ಗೆದ್ದರೆ, ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ.

ಅಲ್ಲದೆ, ಇಂಗ್ಲೆಂಡ್ ಗೆಲುವಿನಿಂದಾಗಿ, ಸೆಮಿಫೈನಲ್‌ನಲ್ಲಿ ಯಾವ 2 ತಂಡಗಳು ಪರಸ್ಪರ ಎದುರಾಗಲಿವೆ? ಎಂಬುದು ಕೂಡ ಭಾಗಶಃ ಖಚಿತವಾಗಿದೆ. ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಮಾರ್ಚ್ 1 ರ ಭಾನುವಾರ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ನಲ್ಲಿ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಬೇಕಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ನಲ್ಲಿ ನಿರ್ಣಾಯಕ ಪಂದ್ಯವು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಲಿದೆ. ಈ ಗೆಲುವಿನೊಂದಿಗೆ, ಟೀಂ ಇಂಡಿಯಾ ಗ್ರೂಪ್ 1 ರ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಳ್ಳಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ನಿಯಮದ ಪ್ರಕಾರ, ಸೂಪರ್ 8 ಸುತ್ತಿನಲ್ಲಿ ಗ್ರೂಪ್ 1 ರಲ್ಲಿ ಅಗ್ರಸ್ಥಾನ ಪಡೆಯುವ ತಂಡವು ಗ್ರೂಪ್ 2 ರಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಎದುರಿಸಲಿದೆ. ಅಂದರೆ ಗ್ರೂಪ್ 1 ರಲ್ಲಿ ಅಗ್ರಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವು ಗ್ರೂಪ್ 2 ರಲ್ಲಿ 2ನೇ ಸ್ಥಾನದಲ್ಲಿರುವ ತಂಡವನ್ನು ಎದುರಿಸಲಿದೆ.

ಹಾಗೆಯೇ ಗ್ರೂಪ್ ಎರಡಲ್ಲಿ ಅಗ್ರಸ್ಥಾನದಲ್ಲಿರುವ ತಂಡದಲಿರುವ ಗ್ರೂಪ್ ಎ ನಲ್ಲಿ ಎರಡನೇ ಸ್ಥಾನದಲ್ಲಿರುವ ತಂಡವನ್ನು ಸೆಮಿಫೈನಲ್‌ನಲ್ಲಿ ಎದುರಿಸಲಿದೆ. ಇಂಗ್ಲೆಂಡ್ ಗ್ರೂಪ್ 2 ರಲ್ಲಿ ಅಗ್ರಸ್ಥಾನದಲ್ಲಿದೆ. ಆದ್ದರಿಂದ, ಮಾರ್ಚ್ 1 ರ ಭಾನುವಾರ ವಿಂಡೀಸ್ ತಂಡವನ್ನು ಟೀಂ ಇಂಡಿಯಾ ಸೋಲಿಸಿದರೆ, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ, ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆಯ ಸೆಮಿಫೈನಲ್ ಪಂದ್ಯ ನಡೆಯಲಿದೆ. ಇನ್ನು ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಉಭಯ ತಂಡಗಳು ಇದುವರೆಗೆ ಎರಡು ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಉಭಯ ತಂಡಗಳು ತಲಾ ಒಂದು ಬಾರಿ ಗೆಲುವು ಸಾಧಿಸಿವೆ.

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More




