AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲಿಷ್ಠ ತಂಡಗಳನ್ನು ಮಣಿಸಿ ಟಿ20 ವಿಶ್ವಕಪ್​ನಿಂದ ಹೊರಹಾಕಿದ ದುರ್ಬಲ ತಂಡಗಳಿವು

Biggest T20 World Cup Upsets: ಟಿ20 ಕ್ರಿಕೆಟ್ ಅನಿರೀಕ್ಷಿತತೆಯ ಆಟ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಹಲವು ದುರ್ಬಲ ತಂಡಗಳು ಬಲಿಷ್ಠ ತಂಡಗಳನ್ನು ಸೋಲಿಸಿ ಅಚ್ಚರಿ ಮೂಡಿಸಿವೆ. 2024ರಲ್ಲಿ ಅಮೆರಿಕ ಪಾಕಿಸ್ತಾನವನ್ನು, ಅಫ್ಘಾನಿಸ್ತಾನ ಆಸ್ಟ್ರೇಲಿಯಾವನ್ನು ಸೋಲಿಸಿದರೆ, 2022ರಲ್ಲಿ ಜಿಂಬಾಬ್ವೆ ಪಾಕಿಸ್ತಾನವನ್ನು ಮತ್ತು ನಮೀಬಿಯಾ ಶ್ರೀಲಂಕಾವನ್ನು ಸೋಲಿಸಿದ್ದವು. ಈ ಅನಿರೀಕ್ಷಿತ ಫಲಿತಾಂಶಗಳು ಪಂದ್ಯಾವಳಿಯ ಲೆಕ್ಕಾಚಾರವನ್ನೇ ಬುಡಮೇಲು ಮಾಡಿವೆ.

ಪೃಥ್ವಿಶಂಕರ
|

Updated on: Feb 05, 2026 | 8:11 PM

Share
ಟಿ20 ಕ್ರಿಕೆಟ್​ನಲ್ಲಿ ಯಾವ ತಂಡ ದುರ್ಬಲ ಯಾವ ತಂಡ ಬಲಿಷ್ಠ ಎಂದು ಹೇಳುವುದು ಕಷ್ಟಕರ. ಏಕೆಂದರೆ ಪಂದ್ಯದ ದಿನದಂದು ಯಾವ ತಂಡ ಉತ್ತಮ ಪ್ರದರ್ಶನ ನೀಡುತ್ತದೋ ಆ ತಂಡಕ್ಕೆ ಗೆಲುವು ಧಕ್ಕುತ್ತದೆ. ಅದೇ ರೀತಿ ಟಿ20 ವಿಶ್ವಕಪ್ ಇತಿಹಾಸದಲ್ಲೂ ಕೆಲವು ಬಲಿಷ್ಠ ತಂಡಗಳಿಗೆ ನೀರು ಕುಡಿಸಿರುವ ಕೆಲವು ದುರ್ಬಲ ತಂಡಗಳು ಪಂದ್ಯಾವಳಿಯ ಲೆಕ್ಕಾಚಾರವನ್ನೇ ಬುಡಮೇಲು ಮಾಡಿವೆ. ಅಂತಹ ಕೆಲವು ಅಚ್ಚರಿಯ ಫಲಿತಾಂಶಗಳ ಪಟ್ಟಿ ಇಲ್ಲಿದೆ.

1 / 6
2024 ರ ಟಿ20 ವಿಶ್ವಕಪ್‌ನಲ್ಲಿ ಪಾದಾರ್ಪಣೆ ಮಾಡಿದ ಅಮೆರಿಕ ತಂಡ ಆಡಿದ ಮೊದಲ ಆವೃತ್ತಿಯಲ್ಲೇ ಅದ್ಭುತ ಪ್ರದರ್ಶನ ನೀಡಿತು. ಈ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಅಮೆರಿಕ ಎಲ್ಲರನ್ನೂ ಅಚ್ಚರಿಗೊಳಿಸಿತು. ರಣರೋಚಕತೆಯಿಂದ ಕೂಡಿದ್ದ ಈ ಪಂದ್ಯದ ವಿಜೇತರನ್ನು ಸೂಪರ್ ಓವರ್​ನಲ್ಲಿ ನಿರ್ಧರಿಸಲಾಯಿತು. ಅಮೆರಿಕ ಸೂಪರ್ ಓವರ್‌ನಲ್ಲಿ 18 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಕೇವಲ 13 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

2 / 6
2024ರ ಟಿ20 ವಿಶ್ವಕಪ್​ನ ಮತ್ತೊಂದು ಅಚ್ಚರಿಯ ಫಲಿತಾಂಶವೆಂದರೆ ಅಫ್ಘಾನಿಸ್ತಾನ ತಂಡ ಆಸ್ಟ್ರೇಲಿಯಾವನ್ನು ಸೋಲಿಸಿದ್ದು. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಅಫ್ಘಾನಿಸ್ತಾನ 148 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಕೇವಲ 127 ರನ್​ಗಳಿಗೆ ಆಲೌಟ್ ಆಯಿತು. ಇದರಿಂದಾಗಿ ಆಸ್ಟ್ರೇಲಿಯಾ ಟೂರ್ನಮೆಂಟ್​ನಿಂದ ಹೊರಬಿತ್ತು.

3 / 6
2022 ರ ಟಿ20 ವಿಶ್ವಕಪ್‌ನಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿತ್ತು. ಜಿಂಬಾಬ್ವೆ, ಪಾಕಿಸ್ತಾನವನ್ನು ಕೇವಲ ಒಂದು ರನ್‌ನಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 130 ರನ್‌ಗಳನ್ನು ಗಳಿಸಿರೆ, ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ 20 ಓವರ್‌ಗಳಲ್ಲಿ ಕೇವಲ 129 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಪಾಕಿಸ್ತಾನ ಸುಲಭವಾಗಿ ಗೆಲ್ಲುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೇವಲ 1 ರನ್​ನಿಂದ ಸೋತಿತ್ತು.

4 / 6
ಕ್ರಿಕೆಟ್ ಶಿಶು ನಮೀಬಿಯಾ ಕೂಡ 2022 ರ ಟಿ20 ವಿಶ್ವಕಪ್​ನಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸಿತ್ತು. ಈ ಆವೃತ್ತಿಯಲ್ಲಿ ನಮೀಬಿಯಾ ಬಲಿಷ್ಠ ಶ್ರೀಲಂಕಾವನ್ನು ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ನಮೀಬಿಯಾ 163 ರನ್ ಗಳಿಸಿದರೆ ಶ್ರೀಲಂಕಾದ ಇನ್ನಿಂಗ್ಸ್ ಕೇವಲ 108 ರನ್‌ಗಳಿಗೆ ಕೊನೆಗೊಂಡಿತು. ಹೀಗಾಗಿ ನಮೀಬಿಯಾ ಪಂದ್ಯವನ್ನು 55 ರನ್‌ಗಳಿಂದ ಗೆದ್ದುಕೊಂಡಿತು.

5 / 6
2009 ರ ಟಿ20 ವಿಶ್ವಕಪ್​ನಲ್ಲೂ ನೆದರ್ಲ್ಯಾಂಡ್ಸ್ ಇದೇ ರೀತಿಯ ಸಾಧನೆ ಮಾಡಿತು. ಗುಂಪು ಹಂತದಲ್ಲಿ ಇಂಗ್ಲೆಂಡ್  ಲೆಕ್ಕಾಚಾರವನ್ನು ಬುಡಮೇಲು ಮಾಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ಕೊನೆಯ ಎಸೆತದಲ್ಲಿ ಗೆಲುವಿನ ಪತಾಕೆ ಹಾರಿಸಿತು. ಇಂಗ್ಲೆಂಡ್ 4 ವಿಕೆಟ್​ಗಳಿಂದ ಸೋತಿತು.

6 / 6
ಮೆಟ್ರೋ ಟಿಕೆಟ್ ದರ ಏರಿಕೆ ಮಾಡಿದ್ಯಾರು? ತೇಜಸ್ವಿ ಸೂರ್ಯ ಹೇಳಿದ್ದಿಷ್ಟು

ಒಂದು ನಾಯಿಯಿಂದ ತಪ್ಪಿಸಿಕೊಳ್ಳಲು ಗೇಟ್ ಹಾರಿದವನಿಗೆ ಕಾದಿತ್ತು ಶಾಕ್!

ಈ ಕಟ್ಟಡದ ಮುಂಭಾಗ ರೀಲ್ಸ್ ಮಾಡಿ ವಿವಾದ ಮೈಮೇಲೆ ಎಳೆದುಕೊಂಡ ರಜತ್

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ

ಜ್ಯೋತಿಷಿ ಜತೆ ಚಕ್ಕಂದ: ಹೆಂಡ್ತಿಯ ಮತ್ತಷ್ಟು ಕಾಮಪುರಣ ಬಿಚ್ಚಿಟ್ಟ ಪತಿ

ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ

ನಮ್ಮ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್​​ಸಿಎಲ್​​​​ನ CPRO ಹೇಳಿದ್ದಿಷ್ಟು

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ

ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ