T20 World Cups 2024: ಇಂಗ್ಲೆಂಡ್ ತಂಡಕ್ಕೆ ವಿಶ್ವ ದಾಖಲೆಯ ವಿಜಯ

T20 World Cups 2024: ಟಿ20 ವಿಶ್ವಕಪ್​ನ 49ನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿ ಇಂಗ್ಲೆಂಡ್ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ತನ್ನದೆ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಎಸೆತಗಳನ್ನು ಬಾಕಿಯಿರಿಸಿ 10 ವಿಕೆಟ್​ಗಳ ವಿಜಯ ಸಾಧಿಸಿ ವಿಶೇಷ ದಾಖಲೆಯೊಂದು ಇಂಗ್ಲೆಂಡ್ ಹೆಸರಿನಲ್ಲಿತ್ತು.

|

Updated on: Jun 24, 2024 | 11:08 AM

T20 World Cups 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಯುಎಸ್​ಎ ತಂಡಕ್ಕೆ ಸೋಲುಣಿಸಿ ಇಂಗ್ಲೆಂಡ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ದುಕೊಂಡಿತು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಯುಎಸ್​ಎ ಪರ ನಿತೀಶ್ ಕುಮಾರ್ 30 ರನ್ ಬಾರಿಸಿದರೆ, ಕೋರಿ ಅ್ಯಂಡರ್ಸನ್ 29 ರನ್​ಗಳಿಸಿದರು. ಇದರ ಹೊರತಾಗಿ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 18.5 ಓವರ್​ಗಳಲ್ಲಿ 115 ರನ್​ಗಳಿಸಿ ಯುಎಸ್​ಎ ತಂಡ ಆಲೌಟ್ ಆಯಿತು.

2 / 6
116 ರನ್​ಗಳ ಸುಲಭ ಗುರಿ ಪಡೆದ ಇಂಗ್ಲೆಂಡ್ ತಂಡಕ್ಕೆ ಜೋಸ್ ಬಟ್ಲರ್ ಹಾಗೂ ಫಿಲ್ ಸಾಲ್ಟ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಅದರಲ್ಲೂ ಸ್ಪೋಟಕ ಇನಿಂಗ್ಸ್ ಆಡಿದ ಬಟ್ಲರ್ 38 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 83 ರನ್​ ಚಚ್ಚಿದರು. ಈ ಮೂಲಕ ಕೇವಲ 9.4 ಓವರ್​ಗಳಲ್ಲಿ 117 ರನ್​ಗಳಿಸಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

3 / 6
ಈ ಭರ್ಜರಿ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಟಿ20 ವಿಶ್ವಕಪ್​ನಲ್ಲಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಸಹ ತನ್ನದೇ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಹೆಚ್ಚು ಬಾಲ್​ಗಳನ್ನು ಉಳಿಸಿ 10 ವಿಕೆಟ್​ಗಳ ಜಯ ಸಾಧಿಸಿದ ದಾಖಲೆ ಇಂಗ್ಲೆಂಡ್ ತಂಡದ ಹೆಸರಿಗೆ ಸೇರ್ಪಡೆಯಾಗಿದೆ. ಯುಎಸ್​ಎ ವಿರುದ್ಧದ ಈ ಪಂದ್ಯದಲ್ಲಿ 9.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಇಂಗ್ಲೆಂಡ್ ತಂಡ 62 ಎಸೆತಗಳನ್ನು ಬಾಕಿಯಿರಿಸಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಈ ದಾಖಲೆ ಬರೆದಿದೆ.

5 / 6
ಇದಕ್ಕೂ ಮುನ್ನ 2022ರ ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ತಂಡವು 24 ಎಸೆತಗಳನ್ನು ಉಳಿಸಿ 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ 62 ಎಸೆತಗಳನ್ನು ಬಾಕಿಯಿರಿಸಿ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿ ಇಂಗ್ಲೆಂಡ್ ತಂಡವು ವಿಶ್ವ ದಾಖಲೆಯ ವಿಜಯವನ್ನು ತನ್ನದಾಗಿಸಿಕೊಂಡಿದೆ.

6 / 6
Follow us
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ

ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ

ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ

ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ

ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ