
ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ನ 39ನೇ ಪಂದ್ಯದಲ್ಲಿ ಯುವ ಬ್ಯಾಟರ್ ತಂಝಿದ್ ಹಸನ್ ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಚಟ್ಟೋಗ್ರಾಮ್ ಚಾಲೆಂಜರ್ಸ್ ಮತ್ತು ಖುಲ್ನಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.

ಆರಂಭಿಕನಾಗಿ ಕಣಕ್ಕಿಳಿದ ತಂಝಿದ್ ಹಸನ್ ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಒಂದೆಡೆ ಮುಹಮ್ಮದ್ ವಸೀಮ್ (1), ಶೈಕತ್ ಅಲಿ (18) ವಿಕೆಟ್ ಪಡೆಯುವಲ್ಲಿ ಖುಲ್ನಾ ಟೈಗರ್ಸ್ ಬೌಲರ್ಗಳು ಯಶಸ್ವಿಯಾದರೂ ತಂಝಿದ್ ಅಬ್ಬರವನ್ನು ತಡೆಯಲು ಮಾತ್ರ ಸಾಧ್ಯವಾಗಿರಲಿಲ್ಲ.

ಅದರಂತೆ ಖುಲ್ನಾ ಟೈಗರ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ತಂಝಿದ್ ಹಸನ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳ ಸುರಿಮಳೆಗೈದರು. ಪರಿಣಾಮ ಕೇವಲ 58 ಎಸೆತಗಳಲ್ಲಿ ತಂಝಿದ್ ಬ್ಯಾಟ್ನಿಂದ ಶತಕ ಮೂಡಿಬಂತು. ಶತಕದ ಬಳಿಕ ಕೂಡ ಅಬ್ಬರ ಮುಂದುವರೆಸಿದ 23 ವರ್ಷದ ಯುವ ದಾಂಡಿಗ 65 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 116 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ತಂಝಿದ್ ಹಸನ್ ಅವರ ಈ ಸ್ಪೋಟಕ ಶತಕದ ನೆರವಿನಿಂದ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡವು ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 192 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಖುಲ್ನಾ ಟೈಗರ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಅನಾಮುಲ್ ಹಕ್ (35) ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಶಾಯ್ ಹೋಪ್ (31) ಒಂದಷ್ಟು ಹೊತ್ತು ಕ್ರೀಸ್ ಕಚ್ಚಿ ನಿಂತದ್ದು ಬಿಟ್ಟರೆ, ಉಳಿದ ಬ್ಯಾಟರ್ಗಳಿಗೆ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ 19.5 ಓವರ್ಗಳಲ್ಲಿ 127 ರನ್ಗಳಿಸಿ ಖುಲ್ನಾ ಟೈಗರ್ಸ್ ತಂಡವು ಆಲೌಟ್ ಆಯಿತು. ಈ ಮೂಲಕ ಚಟ್ಟೋಗ್ರಾಮ್ ಚಾಲೆಂಜರ್ಸ್ ತಂಡ ಈ ಪಂದ್ಯವನ್ನು 65 ರನ್ಗಳಿಂದ ಗೆದ್ದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಶತಕ ಬಾರಿಸುವುದರೊಂದಿಗೆ ತಂಝಿದ್ ಹಸನ್ ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್ನಲ್ಲಿ ಸೆಂಚುರಿ ಸಿಡಿಸಿದ ಮೂರನೇ ಬಾಂಗ್ಲಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ 116 ರನ್ಗಳೊಂದಿಗೆ ಬಿಪಿಎಲ್ನಲ್ಲಿ ಐದನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ದಾಖಲಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.