IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

SA vs BAN, Taskin Ahmed: ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಈ ಬೆಳವಣಿಗೆ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಸ್ಕಿನ್ ಏನು ಮಾಡಿದ್ದಾರೆ ನೋಡಿ.

Vinay Bhat
|

Updated on:Mar 24, 2022 | 11:18 AM

ಐಪಿಎಲ್ 2022 ಆರಂಭ ಹತ್ತಿರವಾಗುತ್ತಿದ್ದಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಹರಾಜಿನಲ್ಲಿ 7.5 ಕೋಟಿ ಕೊಟ್ಟು ಖರೀದಿ ಮಾಡಿದ ಸ್ಟಾರ್ ಬೌಲರ್ ಮಾರ್ಕ್ ವುಡ್ ಅಲಭ್ಯರಾಗಿದ್ದಾರೆ. ಅವರು ಗಾಯಾಳಾಗಿ ಐಪಿಎಲ್ನಿಂದ ಹಿಂದೆ ಸರಿದಿದ್ದರು. ಹೀಗಾಗಿ ಲಕ್ನೋ ಫ್ರಾಂಚೈಸಿ ಬಾಂಗ್ಲಾದೇಶದ ಬೌಲರ್ ಟಸ್ಕಿನ್ ಅಹ್ಮದ್ ಗೆ ಆಹ್ವಾನ ನೀಡಿತ್ತು.

1 / 5
ಆದರೆ, ಟಸ್ಕಿನ್ ಅಹ್ಮದ್ ಐಪಿಎಲ್ ನಲ್ಲಿ ಆಡುತ್ತಿಲ್ಲ ಎಂದು ಬಾಂಗ್ಲಾದೇಶ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಬಿ) ಹೇಳಿ ನೀಡಿದೆ. ಟಸ್ಕಿನ್ ಅವರಿಗೆ ನಿರಾಕ್ಷೇಪಣಾ ಪತ್ರ ನೀಡಲು ಬಿಸಿಬಿ ನಿರಾಕರಿಸಿದೆ. ಐಪಿಎಲ್ ಸಮಯದಲ್ಲೇ ಬಾಂಗ್ಲಾ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಬಳಿಕ ಶ್ರೀಲಂಕಾ ತಂಡ ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಳ್ಳುವ ಕಾರಣ ಟಸ್ಕಿನ್ ಅವರಿಗೆ ಐಪಿಎಲ್ ಆಡಲು ಆಗುವುದಿಲ್ಲ ಎಂದು ಬಿಸಿಬಿ ತಿಳಿಸಿದೆ.

2 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಈ ಬೆಳವಣಿಗೆ ಬೆನ್ನಲ್ಲೇ ಟಸ್ಕಿನ್ ಅಹ್ಮದ್ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಮಿಂಚು ಹರಿಸಿದ್ದಾರೆ. ತಮ್ಮ ಮಾರಕ ಬೌಲಿಂಗ್ ಮೂಲಕ ಆಫ್ರಿಕಾವನ್ನು ಏಕದಿನ ಪಂದ್ಯದಲ್ಲಿ ಕೇವಲ 154 ರನ್ಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

9 ಓವರ್ ಬೌಲಿಂಗ್ ಮಾಡಿದ ಇವರು ಕೇವಲ 35 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ತೋರಿದ ಇವರು ಪಂದ್ಯಶ್ರೇಷ್ಠ ಜೊತೆಗೆ ಸರಣಿ ಶ್ರೇಷ್ಠ ಕೂಡ ತಮ್ಮದಾಗಿಸಿದರು.

4 / 5
IPL 2022: ಐಪಿಎಲ್​ನಲ್ಲಿ ಸಿಕ್ಕಿಲ್ಲ ಅವಕಾಶ: ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಈತ ಮಾಡಿದ್ದೇನು ನೋಡಿ

ಆಫ್ರಿಕಾ ನೀಡಿದ್ದ 155 ರನ್ ಗಳ ಸುಲಭ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ 26.3 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 156 ರನ್ ಚಚ್ಚಿ ಭರ್ಜರಿ ಗೆಲುವು ಸಾಧಿಸಿತು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿರುವ ಬಾಂಗ್ಲಾ ಸರಣಿ ವಶಪಡಿಸಿಕೊಂಡ ಸಾಧನೆ ಕೂಡ ಮಾಡಿದೆ.

5 / 5

Published On - 10:38 am, Thu, 24 March 22

Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ