- Kannada News Photo gallery Cricket photos TATA IPL 2023 RCB vs MI Virat Kohli and Royal Challengers Bangalore Players Practice for First Match vs Mumbai Indians
RCB vs MI: ಹೊಸ ಬ್ಯಾಟ್ನಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಪ್ರ್ಯಾಕ್ಟೀಸ್: ಚಿನ್ನಸ್ವಾಮಿಯಲ್ಲಿ ಬೆವರು ಹರಿಸುತ್ತಿರುವ ಆರ್ಸಿಬಿ ಬಾಯ್ಸ್
TATA IPL 2023, RCB vs MI: ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದು ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.
Updated on:Apr 02, 2023 | 10:58 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದು ಸಂಜೆ 7:30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫಾಫ್ ಡುಪ್ಲೆಸಿಸ್ ಅವರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿರುವ ಮುಂಬೈ ಇಂಡಿಯನ್ಸ್ (RCB vs MI) ಅನ್ನು ಎದುರಿಸಲಿದೆ.

ಆರ್ಸಿಬಿ- ಮುಂಬೈ ಪಂದ್ಯದ ಟಿಕೆಟ್ ಈಗಾಗಲೇ ಸಂಪೂರ್ಣ ಸೋಲ್ಡ್ ಔಟ್ ಆಗಿದ್ದು ಕ್ರೀಡಾಂಗಣ ಕಿಕ್ಕಿರಿದ ಅಭಿಮಾನಿಗಳಿಂದ ತುಂಬಿರಲಿದೆ. ಅಲ್ಲದೆ ಬರೋಬ್ಬರಿ ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಐಪಿಎಲ್ ನಡೆಯುತ್ತಿರುವ ಕಾರಣ ಅಭಿಮಾನಿಗಳು ಉತ್ಸುಕರಾಗಿದ್ದಾರೆ.

ಕಳೆದ ಆರು ತಿಂಗಳುಗಳಿಂದ ಭರ್ಜರಿ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ ಮೇಲೆ ಎಲ್ಲರ ಕಣ್ಣಿದೆ. ಕೊಹ್ಲಿ ಹಾಗೂ ನಾಯಕ ಫಾಫ್ ಡುಪ್ಲೆಸಿಸ್ ಆರ್ಸಿಬಿ ಪರ ಇನ್ನಿಂಗ್ಸ್ ಆರಂಭಿಸಲಿದ್ದು ಭರ್ಜರಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಹೆಸರು ಇಲ್ಲದ ಹೊಸ ಬ್ಯಾಟ್ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿರುವುದು ಕಂಡುಬಂತು.

ಗ್ಲೆನ್ ಮ್ಯಾಕ್ಸ್ವೆಲ್ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ದಿನೇಶ್ ಕಾರ್ತಿಕ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ನಲ್ಲಿ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟಿಂಗ್ಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಇಂದು ಹೈ ಸ್ಕೋರ್ ಪಂದ್ಯ ಆಗುವುದು ಖಚಿತ. ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಫೋರ್-ಸಿಕ್ಸರ್ಗಳ ಮಳೆ ಸುರಿಯಲಿದೆ.

ಆರ್ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಶಹಬಾಜ್ ಅಹಮದ್, ಅನುಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೊರ್, ಫಿನ್ ಅಲೆನ್, ಸುಯಶ್ ಪ್ರಭುದೇಸಾಯಿ, ಕರ್ಣ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲಿ, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮನೋಜ್ ಬಾಂಢಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್, ಸೋನು ಯಾದವ್, ಮಿಚೆಲ್ ಬ್ರೇಸ್‌ವೆಲ್.
Published On - 10:58 am, Sun, 2 April 23
