AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮೃತಿ ಮಂಧಾನ ದಾಖಲೆ ಧೂಳೀಪಟ: ಹೊಸ ವಿಶ್ವ ದಾಖಲೆ ಬರೆದ ತಝ್ಮಿನ್ ಬ್ರಿಟ್ಸ್

New Zealand Women vs South Africa Women: ಮಹಿಳಾ ಏಕದಿನ ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 231 ರನ್​ ಕಲೆಹಾಕಿದರೆ, ಈ ಗುರಿಯನ್ನು ಸೌತ್ ಆಫ್ರಿಕಾ 40.5 ಓವರ್​ಗಳಲ್ಲಿ 234 ರನ್​ಗಳಿಸಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Oct 07, 2025 | 8:19 AM

Share
ಇಂದೋರ್​ನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸೌತ್ ಆಫ್ರಿಕಾದ ತಝ್ಮಿನ್ ಬ್ರಿಟ್ಸ್ (Tazmin brits) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಟೀಮ್ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ಮಹಿಳಾ ತಂಡವು 47.5 ಓವರ್​ಗಳಲ್ಲಿ 231 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಪರ ಆರಂಭಿಕಳಾಗಿ ಕಣಕ್ಕಿಳಿದ ತಝ್ಮಿನ್ ಸ್ಫೋಟಕ ಇನಿಂಗ್ಸ್ ಆಡಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ತಝ್ಮಿ ಬ್ರಿಟ್ಸ್​ ಕೇವಲ 87 ಎಸೆತಗಳಲ್ಲಿ ಶತಕ ಪೂರೈಸಿದರು.

2 / 5
ಈ ಶತಕದೊಂದಿಗೆ ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ತಝ್ಮಿನ ಬ್ರಿಟ್ಸ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಭಾರತ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಹೆಸರಿನಲ್ಲಿತ್ತು.

3 / 5
ಸ್ಮೃತಿ ಮಂಧಾನ 2024 ರಲ್ಲಿ 4 ಏಕದಿನ ಶತಕಗಳನ್ನು ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಅಲ್ಲದೆ ಈ ವರ್ಷ ಕೂಡ ನಾಲ್ಕು ಸೆಂಚುರಿ ಈ ದಾಖಲೆಯನ್ನು ಸರಿಗಟ್ಟಿದ್ದರು. ಇದೀಗ ಈ ದಾಖಲೆ ಮುರಿದು ತಝ್ಮಿನ್ ಬ್ರಿಟ್ಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 5
ತಝ್ಮಿನ್ ಬ್ರಿಟ್ಸ್ ಈ ವರ್ಷ ಆಡಿದ 11 ಏಕದಿನ ಪಂದ್ಯಗಳಲ್ಲಿ 5 ಶತಕ ಸಿಡಿಸಿದ್ದಾರೆ. ಈ ಐದು ಸೆಂಚುರಿಗಳೊಂದಿಗೆ ಮಹಿಳಾ ಏಕದಿನ ಇತಿಹಾಸದಲ್ಲೇ ಒಂದೇ ವರ್ಷ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಹಾಗೆಯೇ ಅತೀ ಕಡಿಮೆ ಪಂದ್ಯಗಳಲ್ಲಿ 7 ಏಕದಿನ ಸೆಂಚುರಿ ಸಿಡಿಸಿದ ಮಹಿಳಾ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಕೇವಲ 41 ಇನಿಂಗ್ಸ್​ಗಳ ಮೂಲಕ ಎಂಬುದು ವಿಶೇಷ.

5 / 5