AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ 10 ತಂಡಗಳ ವಿರುದ್ಧ ಟೀಂ ಇಂಡಿಯಾ ಸೋಲಿಲ್ಲದ ಸರದಾರ..!

ಜಪಾನ್ ವಿರುದ್ಧದ ಗೆಲುವಿನೊಂದಿಗೆ, ಟೀಂ ಇಂಡಿಯಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಗೆಲುವುಗಳನ್ನು ಸಾಧಿಸಿದ ಮೊದಲ ತಂಡ ಎಂಬ ಇತಿಹಾಸ ಸೃಷ್ಟಿಸಿದೆ. ಈ ಲೇಖನದಲ್ಲಿ, ಭಾರತ ಅತಿ ಹೆಚ್ಚು ಗೆದ್ದಿರುವ (ಶ್ರೀಲಂಕಾ), ಅತಿ ಹೆಚ್ಚು ಸೋತಿದ್ದ (ಇಂಗ್ಲೆಂಡ್) ತಂಡಗಳನ್ನು ವಿಶ್ಲೇಷಿಸುತ್ತದೆ. ಅಲ್ಲದೆ, ಅಫ್ಘಾನಿಸ್ತಾನ ಸೇರಿ 10 ತಂಡಗಳ ವಿರುದ್ಧ ಭಾರತ ಎಂದಿಗೂ ಸೋತಿಲ್ಲ.

ಪೃಥ್ವಿಶಂಕರ
|

Updated on: Sep 22, 2026 | 6:07 PM

Share
ಟೀಂ ಇಂಡಿಯಾ, ಜಪಾನ್ ತಂಡವನ್ನು ಸೋಲಿಸುವ ಮೂಲಕ, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200ನೇ ಗೆಲುವು ದಾಖಲಿಸಿತು. ಇದರೊಂದಿಗೆ, ಭಾರತ ತಂಡವು 200 ಟಿ20 ಪಂದ್ಯಗಳನ್ನು ಗೆದ್ದ ಮೊದಲ ತಂಡವೆಂಬ ದಾಖಲೆಯನ್ನು ಬರೆಯಿತು(PC-BCCI X).

1 / 6
ಇನ್ನು ಟೀಂ ಇಂಡಿಯಾ ಯಾವ ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿದೆ? ಯಾವ ತಂಡದ ವಿರುದ್ಧ ಅತಿ ಹೆಚ್ಚು ಪಂದ್ಯಗಳನ್ನು ಸೋತಿದೆ ಮತ್ತು ಯಾವ ತಂಡಗಳ ವಿರುದ್ಧ ಎಂದಿಗೂ ಪಂದ್ಯವನ್ನು ಸೋತಿಲ್ಲ ಎಂಬುದನ್ನು ನೋಡುವುದಾದರೆ(PC-BCCI X)..

2 / 6
ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿದೆ. ಶ್ರೀಲಂಕಾ ವಿರುದ್ಧ ಭಾರತ 23 ಪಂದ್ಯಗಳನ್ನು ಗೆದ್ದಿದ್ದರೆ, ಒಂಬತ್ತು ಪಂದ್ಯಗಳಲ್ಲಿ ಸೋತಿದೆ. ಇದಾದ ನಂತರ, ಆಸ್ಟ್ರೇಲಿಯಾ ವಿರುದ್ಧ ಭಾರತ 22 ಟಿ20 ಪಂದ್ಯಗಳನ್ನು ಗೆದ್ದಿದ್ದರೆ, 12 ಪಂದ್ಯಗಳಲ್ಲಿ ಸೋತಿದೆ(PC-BCCI X).

3 / 6
ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧವೂ ಭಾರತ ಉತ್ತಮ ಪ್ರದರ್ಶನ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ 21 ಪಂದ್ಯಗಳನ್ನು ಗೆದ್ದು 14 ಪಂದ್ಯಗಳಲ್ಲಿ ಸೋತಿದ್ದರೆ, ವೆಸ್ಟ್ ಇಂಡೀಸ್ ವಿರುದ್ಧ 20 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋತಿದೆ(PC-BCCI X).

4 / 6
ಇಂಗ್ಲೆಂಡ್ ವಿರುದ್ಧ ಭಾರತ ಅತಿ ಹೆಚ್ಚು ಪಂದ್ಯಗಳನ್ನು ಸೋತಿದೆ. ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮಾತ್ರ 16 ಪಂದ್ಯಗಳನ್ನು ಸೋತಿದ್ದು, 18 ಪಂದ್ಯಗಳನ್ನು ಗೆದ್ದಿದೆ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದ ಪ್ರದರ್ಶನ ಕೊಂಚ ಕಳಪೆಯಾಗಿದೆ ಎನ್ನಬಹುದು(PC-BCCI X).

5 / 6
ಇನ್ನು ಟೀಂ ಇಂಡಿಯಾ 10 ತಂಡಗಳ ವಿರುದ್ಧ ಇದುವರೆಗೆ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಆ 10 ತಂಡಗಳ ಪೈಕಿ, ಅಫ್ಘಾನಿಸ್ತಾನ, ಯುಎಇ, ನಮೀಬಿಯಾ, ನೆದರ್ಲ್ಯಾಂಡ್ಸ್, ಯುಎಸ್ಎ, ಹಾಂಗ್ ಕಾಂಗ್, ನೇಪಾಳ, ಸ್ಕಾಟ್ಲೆಂಡ್, ಓಮನ್ ಮತ್ತು ಜಪಾನ್ ತಂಡಗಳು ಸೇರಿವೆ(PC-BCCI X).

6 / 6
Follow Us
ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆಶಿ ಪ್ರತಿಕ್ರಿಯೆ ಇಲ್ಲಿದೆ

ಧಾರವಾಡದಲ್ಲಿ ಶಾಲಾ ಕಟ್ಟಡ ಧ್ವಂಸ: ವಿದ್ಯಾರ್ಥಿಗಳಿಗೆ ಪೆಂಡಾಲ್ ಅಡಿ ಪಾಠ

ಟಾಸ್ಕ್ ವೇಳೆ ಚುಚ್ಚು ಮಾತು, ಕಣ್ಣೀರು ಹಾಕಿದ ಆಸಿಯಾ

ಅಡಿಕೆ ಹಾಳೆಯಿಂದ ಎಥೆನಾಲ್ ಉತ್ಪಾದಿಸುವ ಸಂಶೋಧನೆ ಯಶಸ್ವಿ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ಕಾಲಿಗೆ ಗುಂಡೇಟು

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ: LIVE ಇಲ್ಲಿ ನೋಡಿ

ಕಾರು ತೆಗೆಸಿದ್ದಕ್ಕೆ ಡಿಸಿಪಿ ಯೋಗೇಶ್ ವಿರುದ್ಧ ಸಿದ್ಧರಾಮಯ್ಯ ಗರಂ

ಕೆಪಿಎಸ್​ಸಿಯನ್ನೆ ಮುಚ್ಚಿದರೆ ಹೇಗೆಂದು ಚಿಂತನೆ ಮಾಡುತ್ತಿದ್ದೇವೆ: ಸಿಎಂ

ಇನ್ಸ್‌ಪೆಕ್ಟರ್ ಧನಂಜಯ್​ಗೆ ಮತ್ತೊಂದು ಪ್ರಕರಣದಲ್ಲಿ ಸಂಕಷ್ಟ

ಕೆಪಿಎಸ್​ಸಿ ಅಕ್ರಮ ನೇಮಕಾತಿ ಕೇಸ್ ತನಿಖೆ ಎಸ್​ಐಟಿ ಹೆಗಲಿಗೆ!