AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ದಕ್ಷಿಣ ಆಫ್ರಿಕಾದ ವಿಶ್ವ ದಾಖಲೆಯನ್ನು ಸರಿಗಟ್ಟಿದ ಟೀಂ ಇಂಡಿಯಾ

Team India's Eighth 400+ ODI Score: ಅಫ್ಘಾನಿಸ್ತಾನ ವಿರುದ್ಧದ ಏಕದಿನ ಪಂದ್ಯದಲ್ಲಿ ಭಾರತ 402 ರನ್​ಗಳ ಬೃಹತ್ ಮೊತ್ತ ಕಲೆಹಾಕಿತುa. ಶುಭ್‌ಮನ್ ಗಿಲ್ ಮತ್ತು ಇಶಾನ್ ಕಿಶನ್ ಶತಕ ಬಾರಿಸಿ ತಂಡಕ್ಕೆ ಆಧಾರವಾದರು. ಇದು ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಎಂಟನೇ 400+ ಸ್ಕೋರ್ ಆಗಿದ್ದು, ದಕ್ಷಿಣ ಆಫ್ರಿಕಾದ ದಾಖಲೆಯನ್ನು ಸರಿಗಟ್ಟಿದೆ. ಈ ಮೂಲಕ ಇಂಗ್ಲೆಂಡ್ ಅನ್ನು ಹಿಂದಿಕ್ಕಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಪೃಥ್ವಿಶಂಕರ
|

Updated on: Jun 17, 2026 | 7:00 PM

Share
ಬುಧವಾರ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ 402 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ತಂಡದ ಪರ ನಾಯಕ ಶುಭ್‌ಮನ್ ಗಿಲ್ ಮತ್ತು ಇಶಾನ್ ಕಿಶನ್ ಅದ್ಭುತ ಶತಕ ಬಾರಿಸಿದರೆ, ರೋಹಿತ್ ಶರ್ಮಾ ಕೂಡ 48 ರನ್​ಗಳ ಕೊಡುಗೆ ನೀಡಿದರು. ಈ ಮೂವರ ಆಟದಿಂದ ಟೀಂ ಇಂಡಿಯಾ 400 ರನ್​ಗಳ ಗಡಿ ದಾಟಿತು (PC-PTI).

1 / 5
ಈ ಪಂದ್ಯದಲ್ಲಿ 402 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕುವ ಮೂಲಕ ಟೀಂ ಇಂಡಿಯಾ ಏಕದಿನ ಕ್ರಿಕೆಟ್‌ನಲ್ಲಿ ಎಂಟನೇ ಬಾರಿಗೆ 400 ಕ್ಕೂ ಹೆಚ್ಚು ರನ್‌ಗಳನ್ನು ಪೇರಿಸಿದ ದಾಖಲೆಯನ್ನು ಬರೆಯಿತು. ಈ ಮೂಲಕ ಶುಭ್​ಮನ್ ಗಿಲ್ ಪಡೆ, ಏಕದಿನ ಕ್ರಿಕೆಟ್​ನಲ್ಲಿ ಅಧಿಕ ಬಾರಿ 400 ಕ್ಕೂ ಅಧಿಕ ರನ್ ಕಲೆಹಾಕಿದ ತಂಡಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ದಾಖಲೆಯನ್ನು ಸರಿಗಟ್ಟಿದೆ (PC-PTI).

2 / 5
ಅಫ್ಘಾನಿಸ್ತಾನ ವಿರುದ್ಧದ ಈ ಪಂದ್ಯಕ್ಕೂ ಮೊದಲು 31 ತಿಂಗಳ ಹಿಂದೆ ಅಂದರೆ ನವೆಂಬರ್​ನಲ್ಲಿ ನಡೆದಿದ್ದ 2023 ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ, ನೆದರ್ಲ್ಯಾಂಡ್ಸ್ ವಿರುದ್ಧ 400 ಕ್ಕೂ ಅಧಿಕ ರನ್ ಕಲೆಹಾಕಿತ್ತು. ಇದೀಗ 2026 ರಲ್ಲಿ ಭಾರತ ತಂಡ 400 ರನ್​ಗಳ ಗಡಿ ದಾಟಿದೆ. ಇದರೊಂದಿಗೆ ಭಾರತ ತಂಡವು ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ 400 ಕ್ಕೂ ಹೆಚ್ಚು ರನ್ ಗಳಿಸಿದ ತಂಡಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿದೆ (PC-PTI).

3 / 5
ಇಂಗ್ಲೆಂಡ್ 7 ಬಾರಿ ಈ ಸಾಧನೆ ಮಾಡಿದ್ದರೆ, ದಕ್ಷಿಣ ಆಫ್ರಿಕಾ 8 ಬಾರಿ 400 ಕ್ಕೂ ಹೆಚ್ಚು ರನ್ ಗಳಿಸಿದೆ. ಇದೀಗ ಭಾರತ ಕೂಡ 8ನೇ ಬಾರಿಗೆ 400 ಕ್ಕೂ ಹೆಚ್ಚು ರನ್ ಕಲೆಹಾಕಿ ದಕ್ಷಿಣ ಆಫ್ರಿಕಾದ ದಾಖಲೆಯನ್ನು ಸರಿಗಟ್ಟಿದೆ. ಏಕದಿನ ಪಂದ್ಯಗಳಲ್ಲಿ ಭಾರತದ ಅತ್ಯಧಿಕ ಸ್ಕೋರ್ 5 ವಿಕೆಟ್‌ಗೆ 418 ರನ್​ಗಳಾಗಿದ್ದು, ಡಿಸೆಂಬರ್ 2011 ರಲ್ಲಿ ಇಂದೋರ್‌ನಲ್ಲಿ ನಡೆದಿದ್ದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಈ ಸ್ಕೋರ್ ಕಲೆಹಾಕಿತ್ತು.

4 / 5
ಹಾಗೆಯೇ ಭಾರತ 2009 ರಲ್ಲಿ ಶ್ರೀಲಂಕಾ ವಿರುದ್ಧ 7 ವಿಕೆಟ್‌ಗೆ 414 ರನ್ ಕಲೆಹಾಕಿತ್ತು. ಅದಕ್ಕೂ ಮೊದಲು ಅಂದರೆ 2007 ರ ಏಕದಿನ ವಿಶ್ವಕಪ್‌ನಲ್ಲಿ ಬರ್ಮುಡಾ ವಿರುದ್ಧ 5 ವಿಕೆಟ್‌ಗೆ 413 ರನ್ ಪೇರಿಸಿತ್ತು. 2023 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ 410 ರನ್ ಬಾರಿಸಿದ್ದ ಭಾರತ,  2022 ರಲ್ಲಿ ಬಾಂಗ್ಲಾದೇಶ ವಿರುದ್ಧ 409 ರನ್ ಬಾರಿಸಿತ್ತು. 2014 ರಲ್ಲಿ ಶ್ರೀಲಂಕಾ ವಿರುದ್ಧ 404 ರನ್ ಕಲೆಹಾಕಿದ್ದ ಟೀಂ ಇಂಡಿಯಾ, 2010 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 401 ರನ್ ಬಾರಿಸಿತ್ತು.

5 / 5
Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು