Team India: ಒಂದೇ ಒಂದು ಪಂದ್ಯ ಗೆದ್ದು ಫೈನಲ್ಗೆ ಎಂಟ್ರಿ ಕೊಟ್ಟ ಟೀಮ್ ಇಂಡಿಯಾ..!
TV9 Web | Updated By: ಝಾಹಿರ್ ಯೂಸುಫ್
Updated on:
Jun 20, 2023 | 2:39 PM
Womens Emerging Teams Asia Cup 2023: ಸೋಮವಾರ ಶ್ರೀಲಂಕಾ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಇನ್ನು ಮೀಸಲು ದಿನದಾಟದಲ್ಲೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗಿಲ್ಲ.
1 / 5
Womens Emerging Teams Asia Cup 2023: ಹಾಂಗ್ಕಾಂಗ್ನಲ್ಲಿ ನಡೆಯುತ್ತಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಎ ತಂಡವು ಫೈನಲ್ಗೆ ಪ್ರವೇಶಿಸಿದೆ. ಈ ಟೂರ್ನಿಯಲ್ಲಿ ಭಾರತ ತಂಡವು ಕೇವಲ ಒಂದು ಪಂದ್ಯವನ್ನು ಗೆದ್ದು ಪ್ರಶಸ್ತಿ ಸುತ್ತಿಗೆ ತಲುಪಿರುವುದು ವಿಶೇಷ.
2 / 5
ಅಂದರೆ ಭಾರತ ತಂಡವು ಲೀಗ್ ಹಂತದಲ್ಲಿ ಹಾಂಗ್ಕಾಂಗ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತ್ತು. ಇದಾದ ಬಳಿಕ ನೇಪಾಳ ಹಾಗೂ ಪಾಕಿಸ್ತಾನ್ ವಿರುದ್ಧದ ಪಂದ್ಯಗಳು ಮಳೆಗೆ ಆಹುತಿಯಾಗಿದೆ. ಇತ್ತ ಉತ್ತಮ ನೆಟ್ ರನ್ ರೇಟ್ ಹೊಂದಿದ್ದರಿಂದ ಭಾರತ ತಂಡವು ಸೆಮಿ ಫೈನಲ್ ಪ್ರವೇಶಿಸಿತ್ತು.
3 / 5
ಅದರಂತೆ ಸೋಮವಾರ ಶ್ರೀಲಂಕಾ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯಕ್ಕೂ ವರುಣ ಅಡ್ಡಿಯಾಗಿದ್ದಾನೆ. ಇನ್ನು ಮೀಸಲು ದಿನದಾಟದಲ್ಲೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹೆಚ್ಚಿನ ರನ್ ರೇಟ್ ಹೊಂದಿದ್ದ ಭಾರತ ತಂಡವು ನೇರವಾಗಿ ಫೈನಲ್ಗೆ ಪ್ರವೇಶಿಸಿದೆ.
4 / 5
ಮತ್ತೊಂದೆಡೆ 2ನೇ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ್ ಎ ಹಾಗೂ ಪಾಕಿಸ್ತಾನ್ ಎ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡವು ಜೂನ್ 21 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯಲಿದೆ.
5 / 5
ಇಲ್ಲಿ ಕುತೂಹಲಕಾರಿ ವಿಷಯ ಎಂದರೆ ಚೊಚ್ಚಲ ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಟೂರ್ನಿಯ ಒಟ್ಟು 8 ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಹೀಗಾಗಿ ಬುಧವಾರ ಫೈನಲ್ ಪಂದ್ಯ ನಡೆಯಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.