46 ವರ್ಷಗಳ ಬಳಿಕ ಟೀಮ್ ಇಂಡಿಯಾದ ಶತಕಗಳ ದಾಖಲೆ ಮುರಿದ ಯಂಗ್ ಇಂಡಿಯಾ
Team India: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು 5 ಶತಕ ಸಿಡಿಸಿದ್ದರು. ಇನ್ನುನಾಲ್ಕನೇ ಪಂದ್ಯದಲ್ಲಿ 3 ಸೆಂಚುರಿ ಬಾರಿಸಿದ್ದರು. ಇದೀಗ ಐದನೇ ಟೆಸ್ಟ್ ಪಂದ್ಯದಲ್ಲೂ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಡೆಯಿಂದ ಶತಕ ಮೂಡಿಬಂದಿದೆ. ಈ ಶತಕಗಳೊಂದಿಗೆ ಯಂಗ್ ಇಂಡಿಯಾ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.
Updated on: Aug 03, 2025 | 12:34 PM

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಭಾರತೀಯ ದಾಂಡಿಗರು ಟೀಮ್ ಇಂಡಿಯಾದ ಬ್ಯಾಟರ್ಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ಭಾರತೀಯ ಬ್ಯಾಟರ್ಗಳು ಒಂದೇ ಸರಣಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ್ದಾರೆ.

ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

ಇನ್ನು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಶುಭ್ಮನ್ ಗಿಲ್ (269) ದ್ವಿಶತಕ ಸಿಡಿಸಿದ್ದರು. ಆ ಬಳಿಕ ದ್ವಿತೀಯ ಇನಿಂಗ್ಸ್ನಲ್ಲಿ 161 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಹಾಗೆಯೇ ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಶತಕ ಬಾರಿಸಿದ್ದರು.

ಹಾಗೆಯೇ ಮ್ಯಾಂಚೆಸ್ಟರ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶುಭ್ಮನ್ ಗಿಲ್ (103), ರವೀಂದ್ರ ಜಡೇಜಾ (107) ಹಾಗೂ ವಾಷಿಂಗ್ಟನ್ ಸುಂದರ್ (101) ಶತಕ ಸಿಡಿಸಿದ್ದಾರೆ. ಇದೀಗ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್ನಲ್ಲಿ ಯಶಸ್ವಿ ಜೈಸ್ವಾಲ್ (118) ಶತಕ ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಭಾರತೀಯ ಬ್ಯಾಟರ್ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಂದರೆ 1978-79 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಒಟ್ಟು 11 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 5 ಪಂದ್ಯಗಳ ಮೂಲಕ ಭಾರತದ ಯಂಗ್ ಬ್ಯಾಟರ್ಗಳು ಒಟ್ಟು 12 ಶತಕ ಸಿಡಿಸಿದ್ದಾರೆ. ಈ ಮೂಲಕ 46 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 12 ಶತಕಗಳ ಸಾಧನೆ ಮಾಡಿದ್ದಾರೆ.
