46 ವರ್ಷಗಳ ಬಳಿಕ ಟೀಮ್ ಇಂಡಿಯಾದ ಶತಕಗಳ ದಾಖಲೆ ಮುರಿದ ಯಂಗ್ ಇಂಡಿಯಾ

Updated By: ಝಾಹಿರ್ ಯೂಸುಫ್

Updated on: Aug 03, 2025 | 12:34 PM

Team India: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು 5 ಶತಕ ಸಿಡಿಸಿದ್ದರು. ಇನ್ನುನಾಲ್ಕನೇ ಪಂದ್ಯದಲ್ಲಿ 3 ಸೆಂಚುರಿ ಬಾರಿಸಿದ್ದರು. ಇದೀಗ ಐದನೇ ಟೆಸ್ಟ್ ಪಂದ್ಯದಲ್ಲೂ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕಡೆಯಿಂದ ಶತಕ ಮೂಡಿಬಂದಿದೆ. ಈ ಶತಕಗಳೊಂದಿಗೆ ಯಂಗ್ ಇಂಡಿಯಾ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಭಾರತೀಯ ದಾಂಡಿಗರು ಟೀಮ್ ಇಂಡಿಯಾದ ಬ್ಯಾಟರ್​ಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಅಂದರೆ ಬರೋಬ್ಬರಿ 46 ವರ್ಷಗಳ ಬಳಿಕ ಭಾರತೀಯ ಬ್ಯಾಟರ್​ಗಳು ಒಂದೇ ಸರಣಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ್ದಾರೆ.

2 / 5
ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

3 / 5
ಇನ್ನು ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಮೈದಾನದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶುಭ್​ಮನ್ ಗಿಲ್ (269) ದ್ವಿಶತಕ ಸಿಡಿಸಿದ್ದರು. ಆ ಬಳಿಕ ದ್ವಿತೀಯ ಇನಿಂಗ್ಸ್​ನಲ್ಲಿ 161 ರನ್​ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು. ಹಾಗೆಯೇ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಶತಕ ಬಾರಿಸಿದ್ದರು.

4 / 5
ಹಾಗೆಯೇ ಮ್ಯಾಂಚೆಸ್ಟರ್​ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಶುಭ್​ಮನ್ ಗಿಲ್ (103), ರವೀಂದ್ರ ಜಡೇಜಾ (107) ಹಾಗೂ ವಾಷಿಂಗ್ಟನ್ ಸುಂದರ್ (101) ಶತಕ ಸಿಡಿಸಿದ್ದಾರೆ. ಇದೀಗ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಐದನೇ ಟೆಸ್ಟ್​ನಲ್ಲಿ ಯಶಸ್ವಿ ಜೈಸ್ವಾಲ್ (118) ಶತಕ ಸಿಡಿಸಿದ್ದಾರೆ. ಈ ಶತಕಗಳೊಂದಿಗೆ ಭಾರತೀಯ ಬ್ಯಾಟರ್​ಗಳು ಹೊಸ ಇತಿಹಾಸ ನಿರ್ಮಿಸಿದ್ದಾರೆ. 

5 / 5
ಅಂದರೆ 1978-79 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಒಟ್ಟು 11 ಶತಕ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 5 ಪಂದ್ಯಗಳ ಮೂಲಕ ಭಾರತದ ಯಂಗ್ ಬ್ಯಾಟರ್​ಗಳು ಒಟ್ಟು 12 ಶತಕ ಸಿಡಿಸಿದ್ದಾರೆ. ಈ ಮೂಲಕ 46 ವರ್ಷಗಳ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ 93 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಣಿಯೊಂದರಲ್ಲಿ 12 ಶತಕಗಳ ಸಾಧನೆ ಮಾಡಿದ್ದಾರೆ.