AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ಫೈನಲ್​ನಿಂದ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನವನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: Dec 19, 2024 | 7:53 AM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಿಂದ ಹೊರಬೀಳುವುದು ಖಚಿತ.

1 / 5
ಏಕೆಂದರೆ ಭಾರತ ತಂಡವು  ಮೆಲ್ಬೋರ್ನ್​ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್​ ಟೇಬಲ್​​ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

2 / 5
ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.

3 / 5
ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು  57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್​ಗೆ ಪ್ರವೇಶಿಸುವುದು ಖಚಿತ.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್​ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್​ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್​ ಅನ್ನು ನಿರೀಕ್ಷಿಸಬಹುದು.

5 / 5
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​

ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ