WTC Final: ಫೈನಲ್ನಿಂದ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶ
WTC final 2025: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯವು ಜೂನ್ 11 ರಿಂದ 15 ರವರಗೆ ನಡೆಯಲಿದೆ. ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ WTC ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಕಣಕ್ಕಿಳಿಯಲಿದೆ. ಪ್ರಸ್ತುತ ಅಂಕ ಪಟ್ಟಿಯಲ್ಲಿ ಸೌತ್ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಟೀಮ್ ಇಂಡಿಯಾ ಮೂರನೇ ಸ್ಥಾನವನ್ನು ಅಲಂಕರಿಸಿದೆ.
1 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿದೆ. ಇದರೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಲ್ಲಿ ಮತ್ತಷ್ಟು ಪೈಪೋಟಿ ಏರ್ಪಟ್ಟಿದೆ. ಏಕೆಂದರೆ ಮುಂದಿನ ಎರಡು ಪಂದ್ಯಗಳು ಉಭಯ ತಂಡಗಳಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬೀಳುವುದು ಖಚಿತ.
2 / 5
ಏಕೆಂದರೆ ಭಾರತ ತಂಡವು ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕ ಪಟ್ಟಿಯಲ್ಲಿ 60.52% ಶೇಕಡಾವಾರು ಅಂಕಗಳನ್ನು ಪಡೆಯಲಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.
3 / 5
ಅತ್ತ ಮುಂದಿನ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಸೋತರೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇದಾಗ್ಯೂ ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ ಎರಡು ಪಂದ್ಯಗಳನ್ನಾಡಬೇಕಿದೆ. ಆದರೆ ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಟೀಮ್ ಇಂಡಿಯಾವನ್ನು ಅಂಕ ಪಟ್ಟಿಯಲ್ಲಿ ಹಿಂದಿಕ್ಕಲು ಸಾಧ್ಯವಾಗುವುದಿಲ್ಲ ಎಂಬುದು ವಿಶೇಷ.
4 / 5
ಏಕೆಂದರೆ ಮುಂದಿನ ಎರಡು ಪಂದ್ಯಗಳಲ್ಲಿನ ಸೋಲು ಆಸ್ಟ್ರೇಲಿಯಾ ತಂಡ ಶೇಕಡಾವಾರು ಅಂಕವನ್ನು 53ಕ್ಕೆ ಇಳಿಸಲಿದೆ. ಇದಾಗ್ಯೂ ಶ್ರೀಲಂಕಾ ವಿರುದ್ಧ 2-0 ಅಂತರದಿಂದ ಸರಣಿ ಗೆದ್ದರೂ ಒಟ್ಟು 57% ಮಾತ್ರ ಪಡೆಯಲಿದೆ. ಅತ್ತ ಟೀಮ್ ಇಂಡಿಯಾ 60% ಪಡೆಯಲಿರುವ ಕಾರಣ ಫೈನಲ್ಗೆ ಪ್ರವೇಶಿಸುವುದು ಖಚಿತ.
5 / 5
ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ಹೊರದಬ್ಬಿ ಭಾರತ ತಂಡ ಫೈನಲ್ಗೆ ಪ್ರವೇಶಿಸಬಹುದು. ಮತ್ತೊಂದೆಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡವು ಪಾಕಿಸ್ತಾನ್ ವಿರುದ್ಧ ಒಂದು ಪಂದ್ಯ ಗೆದ್ದರೆ ಫೈನಲ್ಗೆ ನೇರ ಅರ್ಹತೆ ಪಡೆಯಲಿದೆ. ಹೀಗಾಗಿ ಈ ಬಾರಿ ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಫೈಟ್ ಅನ್ನು ನಿರೀಕ್ಷಿಸಬಹುದು.