AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕ್ ಪಂದ್ಯಕ್ಕೆ ಕ್ಷಣಗಣನೆ: ಟೀಮ್ ಇಂಡಿಯಾ ಪ್ರ್ಯಾಕ್ಟೀಸ್ ಹೇಗಿದೆ ನೋಡಿ

Team India Practice, Asia Cup 2023: ಟೀಮ್ ಇಂಡಿಯಾ ಆಟಗಾರರು ಪಾಕಿಸ್ತಾನ ವಿರುದ್ಧದ ಏಷ್ಯಾಕಪ್ ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ರೋಹಿತ್ ಪಡೆ ಮೈದಾನಕ್ಕೆ ಇಳಿದು ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಈ ಹೈವೋಲ್ಟೇಜ್ ಮ್ಯಾಚ್ ಆಯೋಜಿಸಲಾಗಿದೆ.

Vinay Bhat
|

Updated on: Sep 02, 2023 | 7:33 AM

Share
ಏಷ್ಯಾಕಪ್ 2023 ರಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಲಿದೆ. ಶ್ರೀಲಂಕಾದಲ್ಲಿರುವ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಇಂದು ಸಾಂಪ್ರದಾಯಿಕ ಎದುರಾಳಿಗಳ ಕಾದಾಟಕ್ಕೆ ಸಾಕ್ಷಿಯಾಗಲಿದೆ.

1 / 8
ಟೀಮ್ ಇಂಡಿಯಾ ಆಟಗಾರರು ಈ ಮಹತ್ವದ ಪಂದ್ಯಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ರೋಹಿತ್ ಪಡೆ ಮೈದಾನಕ್ಕೆ ಇಳಿದು ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿದೆ. ವಿಶೇಷ ಎಂದರೆ ಭಾರತೀಯ ಆಟಗಾರರ ಜೊತೆ ಪಾಕ್ ಪ್ಲೇಯರ್ಸ್ ಕೂಡ ಪ್ರ್ಯಾಕ್ಟೀಸ್ ನಡೆಸಿದರು.

2 / 8
ಶ್ರೀಲಂಕಾದ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳಬೇಕಾಗಿರುವುದರಿಂದ ಮತ್ತು ಫ್ಲಡ್‌ಲೈಟ್‌ಗಳಲ್ಲಿ ಸಮಯ ಕಳೆಯಲು ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳ ಆಟಗಾರರು ಒಟ್ಟಿಗೆ ಅಭ್ಯಾಸ ನಡೆಸಿದರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರು ಶಾಹಿನ್ ಅಫ್ರಿದಿ ಬೌಲಿಂಗ್ ಎದುರಿಸಲು ವಿಶೇಷವಾಗಿ ಪ್ರ್ಯಾಕ್ಟೀಸ್ ನಡೆಸಿದ್ದಾರೆ ಎಂದು ಹೇಳಲಾಗಿದೆ.

3 / 8
ಇಂದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬುದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಕೆಎಲ್ ರಾಹುಲ್ ಅಲಭ್ಯರಾಗಿರುವ ಕಾರಣ ವಿಕೆಟ್ ಕೀಪರ್ ಜವಾಬ್ದಾರಿ ಇಶಾನ್ ಕಿಶನ್ ಹೊರಲಿದ್ದಾರೆ. ಆಗ ಓಪನಿಂಗ್ ಸ್ಥಾನಕ್ಕೆ ರೋಹಿತ್-ಗಿಲ್-ಕಿಶನ್ ಮೂರು ಆಯ್ಕೆ ಸಿಗಲಿದೆ. ಹೀಗಾಗಿ ಕೋಚ್ ಹಾಗೂ ನಾಯಕ ಬ್ಯಾಟಿಂಗ್ ಕ್ರಮಾಂಕದಲ್ಲಿ ಯೋಚಿಸಿ ಯೋಜನೆ ರೂಪಿಸಬೇಕಿದೆ.

4 / 8
ಅಂತೆಯೆ ನಾಲ್ಕನೇ ಕ್ರಮಾಂಕದಲ್ಲಿ ಆಡಲಿರುವ ಶ್ರೇಯಸ್ ಅಯ್ಯರ್ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿದೆ. ಕಳೆದ ಮಾರ್ಚ್‌ನಿಂದ ಅಯ್ಯರ್ ಸ್ಪರ್ಧಾತ್ಮಕ ಪಂದ್ಯವನ್ನು ಆಡಿಲ್ಲ. ಹೀಗಾಗಿ ಏಷ್ಯಾಕಪ್ ಇವರಿಗೆ ದೊಡ್ಡ ಪರೀಕ್ಷೆ ಎಂದೇ ಹೇಳಬಹುದು. 50 ಓವರ್‌ಗಳ ಪಂದ್ಯ ಆಗಿರುವುದರಿಂದ ಶ್ರೇಯಸ್ ಎಷ್ಟು ಹೊತ್ತು ಕ್ರೀಸ್​ನಲ್ಲಿ ನಿಲ್ಲುತ್ತಾರೆ ಎಂಬುದು ನೋಡಬೇಕಿದೆ.

5 / 8
ಹೀಗೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಈ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ಕೂಡ ಇದೆ ಎಂದು ವರದಿ ಆಗಿದೆ. ಯುಕೆ ಮೂಲದ ಮೆಟ್ ಆಫೀಸ್ ಪ್ರಕಾರ, ಕ್ಯಾಂಡಿಯಲ್ಲಿ ಇಂಡೋ-ಪಾಕ್ ಕದನ ಪ್ರಾರಂಭವಾಗುವ 30 ನಿಮಿಷಗಳ ಮೊದಲು 70% ಮಳೆಯಾಗಲಿದೆ. ಪಂದ್ಯ ಆರಂಭವಾದರೂ ಮಧ್ಯದಲ್ಲಿ ಮಳೆ ಸುರಿಯುವ ಸಂಭವವಿದೆ ಎಂದು ಹೇಳಲಾಗಿದೆ.

6 / 8
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

7 / 8
ಪಾಕಿಸ್ತಾನ ತಂಡ: ಬಾಬರ್ ಅಜಮ್ (ನಾಯಕ), ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಹ್ಯಾರಿಸ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಫಹೀಮ್ ಅಶ್ರಫ್, ಹ್ಯಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಅಫ್ರಿದಿ, ಸೌದ್ ಶಕೀಲ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ