ಜಸ್ಟ್ 4 ಸಿಕ್ಸ್​ಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಟೀಮ್ ಇಂಡಿಯಾ

India vs South Africa: ಸೌತ್ ಆಫ್ರಿಕಾ ವಿರುದ್ಧದ 4ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 283 ರನ್​ ಕಲೆಹಾಕಿದರೆ, ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 148 ರನ್​ಗಳಿಸಲಷ್ಟೇ ಶಕ್ತವಾಗಿದೆ.

ಝಾಹಿರ್ ಯೂಸುಫ್
|

Updated on:Nov 16, 2024 | 7:57 AM

ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಿಕ್ಸರ್​ಗಳ ಸುರಿಮಳೆಗೈದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 5
ಮೊದಲ ಓವರ್​ನಿಂದಲೇ ಶುರುವಾದ ಅಬ್ಬರ ಕೊನೆಗೊಂಡಿದ್ದು 20ನೇ ಓವರ್​ನಲ್ಲಿ. ಆರಂಭದಲ್ಲಿ ಅಭಿಷೇಕ್ ಶರ್ಮಾ (36) 4 ಸಿಕ್ಸ್ ಬಾರಿಸಿ ಹೊರನಡೆದರೆ, ಆ ಬಳಿಕ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ ಸಿಕ್ಸರ್​ಗಳ ಸರಮಾಲೆಯನ್ನೇ ಸಿಡಿಸಿದರು.

2 / 5
56 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್ (106) ಒಟ್ಟು 9 ಸಿಕ್ಸ್ ಸಿಡಿಸಿದರೆ, ಎಡಗೈ ದಾಂಡಿಗ ತಿಲಕ್ ವರ್ಮಾ (120) 47 ಎಸೆತಗಳಲ್ಲಿ 10 ಸಿಕ್ಸ್ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ ಬ್ಯಾಟರ್​ಗಳಿಂದ ಒಟ್ಟು 23 ಸಿಕ್ಸ್​ಗಳು ಮೂಡಿಬಂತು. ಇದು ಭಾರತದ ಪಾಲಿಗೆ ದಾಖಲೆಯಾದರೂ, ವಿಶ್ವ ದಾಖಲೆಯಲ್ಲ ಎಂಬುದು ವಿಶೇಷ. ಅಂದರೆ ಭಾರತ ತಂಡವು ಕೇವಲ 4 ಸಿಕ್ಸ್​ಗಳ ಅಂತರದಿಂದ ವಿಶ್ವ ದಾಖಲೆಯನ್ನು ಕೈ ತಪ್ಪಿಸಿಕೊಂಡಿದೆ.

3 / 5
ಟಿ20 ಇನಿಂಗ್ಸ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ಝಿಂಬಾಬ್ವೆ ತಂಡದ ಹೆಸರಿನಲ್ಲಿದೆ. 2024 ರಲ್ಲಿ ನಡೆದ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ಝಿಂಬಾಬ್ವೆ ಬ್ಯಾಟರ್​ಗಳು ಒಟ್ಟು 27 ಸಿಕ್ಸ್ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇದೀಗ ಭಾರತೀಯ ಬ್ಯಾಟರ್​ಗಳು 23 ಸಿಕ್ಸ್​ ಸಿಡಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಟಿ20 ಕ್ರಿಕೆಟ್​ ಪಂದ್ಯದ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಪಟ್ಟಿಯಲ್ಲಿ ಝಿಂಬಾಬ್ವೆ (27) ಅಗ್ರಸ್ಥಾನದಲ್ಲಿದ್ದರೆ, ನೇಪಾಳ ತಂಡವು 26 ಸಿಕ್ಸರ್​ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಇದೀಗ ಭಾರತ ತಂಡವು 23 ಸಿಕ್ಸ್ ಸಿಡಿಸಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

5 / 5

Published On - 7:55 am, Sat, 16 November 24

Follow us
ವೃಶ್ಚಿಕ ರಾಶಿಗೆ ಸೂರ್ಯ ಪ್ರವೇಶ, ಗಜಕೇಸರಿ ಯೋಗ, 12 ರಾಶಿಗಳ ಫಲಾಫಲ ಇಲ್ಲಿದೆ

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ

ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ