- TV9 Kannada Kannada News Photos Cricket Photos Prasidh Krishna Fit for India vs NZ Test Series: Major Boost for Team India
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಪ್ರಸಿದ್ಧ್ ಕೃಷ್ಣ ಫಿಟ್; ಭಾರತಕ್ಕೆ ಬಿಗ್ ರಿಲೀಫ್
ಭಾರತದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಗಾಯದಿಂದ ಚೇತರಿಸಿಕೊಂಡಿದ್ದು, ನ್ಯೂಜಿಲೆಂಡ್ ವಿರುದ್ಧದ ನವೆಂಬರ್ 19 ರಿಂದ ಆರಂಭವಾಗುವ ಟೆಸ್ಟ್ ಸರಣಿಗೆ ಫಿಟ್ ಎಂದು ಬಿಸಿಸಿಐ ಘೋಷಿಸಿದೆ. ಹ್ಯಾಮ್‌ಸ್ಟ್ರಿಂಗ್ ಗಾಯದಿಂದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಅವರು, ಈಗ ಟೆಸ್ಟ್ ತಂಡಕ್ಕೆ ಲಭ್ಯವಿರಲಿದ್ದಾರೆ. ಇದು ಟೀಂ ಇಂಡಿಯಾಗೆ ದೊಡ್ಡ ಸಮಾಧಾನ ತಂದಿದೆ. ಭಾರತ ಎ ಪಂದ್ಯದಲ್ಲೂ ಆಡುವ ಸಾಧ್ಯತೆ ಇದೆ.
Updated on: Nov 03, 2026 | 9:01 PM

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಸಿಹಿ ಸುದ್ದಿ ಸಿಕ್ಕಿದೆ. ಭಾರತದ ಅನುಭವಿ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಗಾಯದಿಂದ ಚೇತರಿಸಿಕೊಂಡಿದ್ದು, ನವೆಂಬರ್ 19ರಿಂದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಫಿಟ್ ಎಂದು ಘೋಷಿಸಲಾಗಿದೆ(PC-PTI).

ಎಡಗಾಲಿನ ಹ್ಯಾಮ್‌ಸ್ಟ್ರಿಂಗ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಪ್ರಸಿದ್ಧ್ ಕೃಷ್ಣ, ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಅವರು ಟೆಸ್ಟ್ ಸರಣಿಗೆ ಲಭ್ಯವಾಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಬಿಸಿಸಿಐ ಮೂಲಗಳು ಮಾಹಿತಿ ನೀಡಿದ್ದು, ಪ್ರಸಿದ್ಧ್ ಕೃಷ್ಣ ಅವರನ್ನು ಫಿಟ್ ಎಂದು ಘೋಷಿಸಲಾಗಿದೆ(PC-PTI).

ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗೆ ಅವರು ಆಯ್ಕೆಗೆ ಲಭ್ಯವಿರಲಿದ್ದಾರೆ ಎಂದು ತಿಳಿಸಿವೆ. ಇದಲ್ಲದೆ, ನವೆಂಬರ್ 7ರಿಂದ 10ರವರೆಗೆ ಲಿಂಕನ್‌ನಲ್ಲಿ ನಡೆಯಲಿರುವ ಭಾರತ ಎ ಮತ್ತು ನ್ಯೂಜಿಲೆಂಡ್ ಎ ನಡುವಿನ ಮೂರನೇ ಅನಧಿಕೃತ ನಾಲ್ಕು ದಿನಗಳ ಟೆಸ್ಟ್ ಪಂದ್ಯದಲ್ಲೂ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯುವ ಸಾಧ್ಯತೆಯಿದೆ(PC-PTI).

ನವೆಂಬರ್ 4ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ಆರಂಭಿಕ ಮೂರು ಪಂದ್ಯಗಳಿಗೆ ಆಯ್ಕೆ ಮಾಡಲಾಗಿತ್ತು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಏಕದಿನ ಸರಣಿಯ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಕಾರಣ ಅವರು ಈ ಸರಣಿಯಿಂದ ಹೊರಗುಳಿಯಬೇಕಾಯಿತು(PC-PTI).

ಕೆಲವು ದಿನಗಳ ಹಿಂದಷ್ಟೇ ಬಿಸಿಸಿಐ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿತ್ತು. ಗಾಯದ ಕಾರಣ ಪ್ರಸಿದ್ಧ್ ಕೃಷ್ಣ ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗದಿದ್ದರೂ, ಟೆಸ್ಟ್ ಸರಣಿಗೂ ಮುನ್ನ ಫಿಟ್ ಆಗಿರುವುದು ಭಾರತ ತಂಡಕ್ಕೆ ದೊಡ್ಡ ಸಮಾಧಾನ ತಂದಿದೆ(PC-PTI).

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



