ಅಫ್ಘಾನಿಸ್ತಾನ್ ವಿರುದ್ಧ ಗೆದ್ದು ಪಾಕಿಸ್ತಾನ್ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

India vs Afghanistan: ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 6 ಎಸೆತಗಳಲ್ಲಿ 16 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೂಡ 16 ರನ್​ಗಳಿಸಲಷ್ಟೇ ಶಕ್ತರಾದರು.

| Updated By: ಝಾಹಿರ್ ಯೂಸುಫ್

Updated on:Jan 18, 2024 | 8:11 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಅಫ್ಘಾನಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ರೋಹಿತ್ ಶರ್ಮಾ (121) ಶತಕದ ನೆರವಿನಿಂದ 212 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡ 212 ರನ್ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಂಡಿತು.

1 / 7
ಅದರಂತೆ ಸೂಪರ್ ಓವರ್​ನತ್ತ ಸಾಗಿದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 6 ಎಸೆತಗಳಲ್ಲಿ 16 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೂಡ 16 ರನ್​ಗಳಿಸಲಷ್ಟೇ ಶಕ್ತರಾದರು. ಸೂಪರ್ ಓವರ್ ಕೂಡ​ ಟೈನಲ್ಲಿ ಅಂತ್ಯಕಂಡಿತು.

2 / 7
ಇದರೊಂದಿಗೆ ಪಂದ್ಯವು 2ನೇ ಸೂಪರ್ ಓವರ್​ನತ್ತ ಸಾಗಿತು. ದ್ವಿತೀಯ ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 5 ಎಸೆತಗಳಲ್ಲಿ 2 ವಿಕೆಟ್ ಕಳೆದುಕೊಂಡು 11 ರನ್ ಕಲೆಹಾಕಿತು. 12 ರನ್​ಗಳ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 1 ರನ್​ಗಳಿಸುವಷ್ಟರಲ್ಲಿ 2 ವಿಕೆಟ್​ ಕಳೆದುಕೊಂಡು 10 ರನ್​ಗಳಿಂದ ಸೋಲೊಪ್ಪಿಕೊಂಡಿತು.

3 / 7
ಅಫ್ಘಾನಿಸ್ತಾನ್ ವಿರುದ್ಧದ ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಪಾಕಿಸ್ತಾನ್ ತಂಡದ ವಿಶ್ವ ದಾಖಲೆಯನ್ನು ಮುರಿದಿರುವುದು ವಿಶೇಷ. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಭಾರತ ತಂಡ 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

4 / 7
ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡ ವಿಶೇಷ ವಿಶ್ವ ದಾಖಲೆಯನ್ನು ಭಾರತ ತಂಡ ನಿರ್ಮಿಸಿದೆ. ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು.

5 / 7
ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್​ನಲ್ಲಿ 8 ಸರಣಿಗಳನ್ನು ಕ್ಲೀನ್ ಸ್ವೀಪ್ ಮಾಡಿ ಗೆದ್ದುಕೊಂಡಿದೆ. ಇದೀಗ ಈ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

6 / 7
ಭಾರತ ತಂಡವು ಆಸ್ಟ್ರೇಲಿಯಾ (1 ಬಾರಿ), ಶ್ರೀಲಂಕಾ (2 ಬಾರಿ), ನ್ಯೂಝಿಲೆಂಡ್ (2 ಬಾರಿ), ವೆಸ್ಟ್ ಇಂಡೀಸ್ (3 ಬಾರಿ) ಹಾಗೂ ಅಫ್ಘಾನಿಸ್ತಾನ್ ವಿರುದ್ಧ ಕ್ಲೀನ್ ಸರಣಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 9 ಕ್ಲೀನ್ ಸ್ವೀಪ್ ಸರಣಿ ಜಯದೊಂದಿಗೆ ಪಾಕ್ ದಾಖಲೆ ಮುರಿದು ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ಬರೆದಿರುವುದು ವಿಶೇಷ.

7 / 7

Published On - 8:08 am, Thu, 18 January 24

Follow us