AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ

Team India Records: ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ದಾಖಲೆಗಳಲ್ಲಿ ಒಂದು ಸರ್ವಶ್ರೇಷ್ಠ ದಾಖಲೆ ಕೂಡ ಇದು. ಸೋಮರ್​ಸೆಟ್ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Oct 13, 2024 | 11:54 AM

Share
ಹೈದರಾಬಾದ್​ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದ ಮೂಲಕ ಭಾರತ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಅತೀ ಹೆಚ್ಚು ಬಾರಿ 200+ ಸ್ಕೋರ್​ಗಳಿಸುವ ಮೂಲಕ ಎಂಬುದು ವಿಶೇಷ.

1 / 6
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಬಾಂಗ್ಲಾದೇಶ್ ತಂಡದ ವಿರುದ್ಧ 20 ಓವರ್​ಗಳಲ್ಲಿ 297 ರನ್​ಗಳನ್ನು ಬಾರಿಸುವ ಮೂಲಕ ಈ ವಿಶ್ವ ದಾಖಲೆಯನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.

2 / 6
ಇದಕ್ಕೂ ಮುನ್ನ ಈ ವರ್ಲ್ಡ್​ ರೆಕಾರ್ಡ್ ಇಂಗ್ಲೆಂಡ್​ನ ಕೌಂಟಿ ತಂಡ ಸೋಮರ್‌ಸೆಟ್ ಹೆಸರಿನಲ್ಲಿತ್ತು. ಸೋಮರ್‌ಸೆಟ್ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 36 ಬಾರಿ 200 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 238	 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 37 ಬಾರಿ 200+ ಸ್ಕೋರ್​ ಗಳಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್​ಗಳಿಸಿದ ತಂಡ ಎನಿಸಿಕೊಂಡಿದೆ.

4 / 6
ಹಾಗೆಯೇ ಈ ಪಂದ್ಯದಲ್ಲಿ 297 ರನ್​ ಬಾರಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸ್ಕೋರ್​ಗಳಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ. ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ಟೆಸ್ಟ್ ಮಾನ್ಯತೆ ಹೊಂದಿರುವ ತಂಡವೆಂಬ ವಿಶ್ವ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ.

5 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್​ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 133 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ