ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ
Team India Records: ಬಾಂಗ್ಲಾದೇಶ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ಟೀಮ್ ಇಂಡಿಯಾ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ದಾಖಲೆಗಳಲ್ಲಿ ಒಂದು ಸರ್ವಶ್ರೇಷ್ಠ ದಾಖಲೆ ಕೂಡ ಇದು. ಸೋಮರ್‌ಸೆಟ್ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಟೀಮ್ ಇಂಡಿಯಾ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದೆ.
1 / 6
ಹೈದರಾಬಾದ್ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೂರನೇ ಟಿ20 ಪಂದ್ಯದ ಮೂಲಕ ಭಾರತ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಅತೀ ಹೆಚ್ಚು ಬಾರಿ 200+ ಸ್ಕೋರ್ಗಳಿಸುವ ಮೂಲಕ ಎಂಬುದು ವಿಶೇಷ.
2 / 6
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ 200 ಕ್ಕಿಂತ ಅಧಿಕ ಸ್ಕೋರ್ಗಳಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಬಾಂಗ್ಲಾದೇಶ್ ತಂಡದ ವಿರುದ್ಧ 20 ಓವರ್ಗಳಲ್ಲಿ 297 ರನ್ಗಳನ್ನು ಬಾರಿಸುವ ಮೂಲಕ ಈ ವಿಶ್ವ ದಾಖಲೆಯನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.
3 / 6
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಇಂಗ್ಲೆಂಡ್ನ ಕೌಂಟಿ ತಂಡ ಸೋಮರ್‌ಸೆಟ್ ಹೆಸರಿನಲ್ಲಿತ್ತು. ಸೋಮರ್‌ಸೆಟ್ ತಂಡವು ಟಿ20 ಕ್ರಿಕೆಟ್ನಲ್ಲಿ ಒಟ್ಟು 36 ಬಾರಿ 200 ಕ್ಕಿಂತ ಅಧಿಕ ಸ್ಕೋರ್ಗಳಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.
4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 238 ಟಿ20 ಪಂದ್ಯಗಳನ್ನಾಡಿರುವ ಭಾರತ ತಂಡವು ಒಟ್ಟು 37 ಬಾರಿ 200+ ಸ್ಕೋರ್ ಗಳಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಬಾರಿ ಇನ್ನೂರಕ್ಕಿಂತ ಅಧಿಕ ಸ್ಕೋರ್ಗಳಿಸಿದ ತಂಡ ಎನಿಸಿಕೊಂಡಿದೆ.
5 / 6
ಹಾಗೆಯೇ ಈ ಪಂದ್ಯದಲ್ಲಿ 297 ರನ್ ಬಾರಿಸುವ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸ್ಕೋರ್ಗಳಿಸಿದ ವಿಶ್ವದ 2ನೇ ತಂಡ ಎನಿಸಿಕೊಂಡಿದೆ. ಇದಲ್ಲದೆ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ಸ್ಕೋರ್ಗಳಿಸಿದ ಟೆಸ್ಟ್ ಮಾನ್ಯತೆ ಹೊಂದಿರುವ ತಂಡವೆಂಬ ವಿಶ್ವ ದಾಖಲೆ ಕೂಡ ಟೀಮ್ ಇಂಡಿಯಾ ಪಾಲಾಗಿದೆ.
6 / 6
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 298 ರನ್ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 164 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 133 ರನ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ಗೆದ್ದುಕೊಂಡಿದೆ.