ಕೆನಡಾ ತಂಡದ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ

Updated on: Oct 03, 2026 | 9:00 AM

ಟಿ20 ಕ್ರಿಕೆಟ್ ಸಾಮ್ರಾಜ್ಯದಲ್ಲಿ ಟೀಮ್ ಇಂಡಿಯಾದ ಪಾರುಪತ್ಯ ಮುಂದುವರಿದಿದೆ! ಈ ಬಾರಿ ಶ್ರೀಲಂಕಾ ತಂಡವನ್ನು ಅತ್ಯಲ್ಪ ಮೊತ್ತಕ್ಕೆ ಆಲೌಟ್ ಮಾಡುವ ಮೂಲಕ ಭಾರತೀಯ ಬೌಲರ್‌ಗಳು ಅಧಿಪತ್ಯ ಸ್ಥಾಪಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಭಾರತ ತಂಡ ಹೊಸ ವಿಶ್ವ ದಾಖಲೆಯ ಇತಿಹಾಸ ನಿರ್ಮಿಸಿದೆ.

1 / 5
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಕೆನಡಾ ತಂಡದ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. ಭಾರತ ತಂಡ ಮುರಿದ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ... (PC: BCCI)

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಕೆನಡಾ ತಂಡದ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ. ಭಾರತ ತಂಡ ಮುರಿದ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ... (PC: BCCI)

2 / 5

ಏಷ್ಯನ್ ಗೇಮ್ಸ್​ನ ದ್ವಿತೀಯ ಸೆಮಿಫೈನಲ್​ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ ಭಾರತ ಭರ್ಜರಿ ಜಯ ಸಾಧಿಸಿದೆ. ಜಪಾನ್​​ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​​​ಗಳಲ್ಲಿ 169 ರನ್​​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡ 9.5 ಓವರ್​​ಗಳಲ್ಲಿ ಕೇವಲ 45 ರನ್​​​ಗಳಿಸಿ ಆಲೌಟ್ ಆಗಿದೆ. (PC: BCCI)

3 / 5

ಈ ಮೂಲಕ ಟೀಮ್ ಇಂಡಿಯಾ ಬರೋಬ್ಬರಿ 124 ರನ್​​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅತೀ ಹೆಚ್ಚು ಬಾರಿ 100+ ರನ್​​​ಗಳ ಅಂತರದಿಂದ ವಿಜಯ ಸಾಧಿಸಿದ ತಂಡವೆಂಬ ಹೆಗ್ಗಳಿಕೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಕೆನಡಾ ತಂಡದ ಹೆಸರಿನಲ್ಲಿತ್ತು. (PC: BCCI)

4 / 5

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 90 ಪಂದ್ಯಗಳನ್ನಾಡಿರುವ ಕೆನಡಾ ತಂಡವು ಒಟ್ಟು 10 ಬಾರಿ 100 ಕ್ಕಿಂತ ಅಧಿಕ ರನ್​​​ಗಳ ಅಂತರದಿಂದ ಗೆಲುವು ಸಾಧಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಇದೀಗ ಟೀಮ್ ಇಂಡಿಯಾ ಮುರಿದಿದೆ. (PC: Getty Images)

5 / 5

ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 292 ಪಂದ್ಯಗಳನ್ನಾಡಿದ್ದು, ಈ ವೇಳೆ 11 ಬಾರಿ 100 ಕ್ಕಿಂತ ಅಧಿಕ ರನ್​​ಗಳ ಅಂತರದಿಂದ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ 100+ ರನ್​ಗಳ ಅಂತರದಿಂದ ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. (PC: BCCI)

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us