ಬರೋಬ್ಬರಿ 69 ಸಿಕ್ಸ್… ಸಿಕ್ಸರ್ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ
India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 225 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಪಡೆ 46 ರನ್ಗಳ ವಿಜಯ ಸಾಧಿಸಿದೆ.
Updated on: Feb 01, 2026 | 8:53 AM

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಸಿಕ್ಸರ್ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ನ್ಯೂಝಿಲೆಂಡ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳು ಸಿಡಿಸಿರುವ ಸಿಕ್ಸರ್ಗಳ ಸಂಖ್ಯೆ ಬರೋಬ್ಬರಿ 69 ಎಂದರೆ ನಂಬಲೇಬೇಕು. ಈ ಮೂಲಕ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ತಂಡ ಎಂಬ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್ಗಳು ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಹೆಸರಿನಲ್ಲಿತ್ತು. 2023 ರಲ್ಲಿ ಇಂಗ್ಲೆಂಡ್ ಬ್ಯಾಟರ್ಗಳು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಒಟ್ಟು 64 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. 2025 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 64 ಸಿಕ್ಸ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟರ್ಗಳು ಈ ದಾಖಲೆಯನ್ನು ಸರಿಗಟ್ಟಿದ್ದರು.

ಇದೀಗ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್ಗಳು ಅಳಿಸಿ ಹಾಕಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳಲ್ಲಿ ಬರೋಬ್ಬರಿ 69 ಸಿಕ್ಸ್ ಸಿಡಿಸುವ ಮೂಲಕ ಒಂದೇ ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

ಅಷ್ಟೇ ಅಲ್ಲದೆ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ಭಾರತ-ನ್ಯೂಝಿಲೆಂಡ್ ಬ್ಯಾಟರ್ಗಳು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್-ಸೌತ್ ಆಫ್ರಿಕಾ ತಂಡಗಳ ಹೆಸರಿನಲ್ಲಿತ್ತು. 2023 ರಲ್ಲಿ ನಡೆದ ಪಂದ್ಯವೊಂದರಲ್ಲಿ ಬರೋಬ್ಬರಿ 35 ಸಿಕ್ಸ್ ಸಿಡಿಸಿ ಮ್ಯಾಚ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ನಿರ್ಮಿಸಿದ್ದರು. ಇದೀಗ ಐದನೇ ಟಿ20 ಪಂದ್ಯದಲ್ಲಿ ಭಾರತ (23) ಮತ್ತು ನ್ಯೂಝಿಲೆಂಡ್ (13) ಒಟ್ಟು 36 ಸಿಕ್ಸ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



