AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 69 ಸಿಕ್ಸ್… ಸಿಕ್ಸರ್​ಗಳ ಸುರಿಮಳೆಗೆ ವಿಶ್ವ ದಾಖಲೆ ಧೂಳೀಪಟ

India vs New zealand: ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕಲೆಹಾಕಿದ್ದು ಬರೋಬ್ಬರಿ 271 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 225 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಸೂರ್ಯಕುಮಾರ್ ಯಾದವ್ ಪಡೆ 46 ರನ್​ಗಳ ವಿಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 01, 2026 | 8:53 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಸಹ ಸಿಕ್ಸರ್​ಗಳ ಸುರಿಮಳೆಯೊಂದಿಗೆ ಎಂಬುದು ವಿಶೇಷ. ಅಂದರೆ ಟಿ20 ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ಸಿಕ್ಸರ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

1 / 5
ನ್ಯೂಝಿಲೆಂಡ್ ವಿರುದ್ಧದ ಈ ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಸಿಡಿಸಿರುವ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 69 ಎಂದರೆ ನಂಬಲೇಬೇಕು. ಈ ಮೂಲಕ ಸರಣಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ತಂಡ ಎಂಬ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್​ಗಳು ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ಹೆಸರಿನಲ್ಲಿತ್ತು. 2023 ರಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಒಟ್ಟು 64 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. 2025 ರಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ 64 ಸಿಕ್ಸ್ ಬಾರಿಸುವ ಮೂಲಕ ಆಸ್ಟ್ರೇಲಿಯಾ ಬ್ಯಾಟರ್​ಗಳು ಈ ದಾಖಲೆಯನ್ನು ಸರಿಗಟ್ಟಿದ್ದರು.

3 / 5
ಇದೀಗ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಭಾರತೀಯ ಬ್ಯಾಟರ್​ಗಳು ಅಳಿಸಿ ಹಾಕಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳಲ್ಲಿ ಬರೋಬ್ಬರಿ 69 ಸಿಕ್ಸ್ ಸಿಡಿಸುವ ಮೂಲಕ ಒಂದೇ ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

4 / 5
ಅಷ್ಟೇ ಅಲ್ಲದೆ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆಯನ್ನು ಭಾರತ-ನ್ಯೂಝಿಲೆಂಡ್ ಬ್ಯಾಟರ್​ಗಳು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್-ಸೌತ್ ಆಫ್ರಿಕಾ ತಂಡಗಳ ಹೆಸರಿನಲ್ಲಿತ್ತು. 2023 ರಲ್ಲಿ ನಡೆದ ಪಂದ್ಯವೊಂದರಲ್ಲಿ ಬರೋಬ್ಬರಿ 35 ಸಿಕ್ಸ್ ಸಿಡಿಸಿ ಮ್ಯಾಚ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ನಿರ್ಮಿಸಿದ್ದರು. ಇದೀಗ ಐದನೇ ಟಿ20 ಪಂದ್ಯದಲ್ಲಿ ಭಾರತ (23) ಮತ್ತು ನ್ಯೂಝಿಲೆಂಡ್ (13) ಒಟ್ಟು 36 ಸಿಕ್ಸ್​ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ

ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ

ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ

ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ

ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು

ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು

ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್