- Kannada News Photo gallery Cricket photos Team India Breaks Pakistan's highest number of players in T20Is
ಪಾಕಿಸ್ತಾನ್ ವಿಶ್ವ ದಾಖಲೆ ಮುರಿದ ಟೀಮ್ ಇಂಡಿಯಾ
India vs Bangladesh: ಗಾಲ್ವಿಯರ್ನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಪಾಕಿಸ್ತಾನ್ ಹೆಸರಿನಲ್ಲಿದ್ದ ವರ್ಲ್ಡ್ ರೆಕಾರ್ಡ್ ಅನ್ನು ಮುರಿಯುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸಿದೆ.
Updated on: Oct 07, 2024 | 1:58 PM

ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಪ್ಲೇಯರ್ಗಳನ್ನು ಕಣಕ್ಕಿಳಿಸುವ ಮೂಲಕ ಎಂಬುದು ವಿಶೇಷ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಪಾಕಿಸ್ತಾನ್ ತಂಡದ ಹೆಸರಿನಲ್ಲಿತ್ತು. 2006 ರಿಂದ 2024 ರವರೆಗೆ ಪಾಕಿಸ್ತಾನ್ ತಂಡವು ಟಿ20 ಕ್ರಿಕೆಟ್ನಲ್ಲಿ ಒಟ್ಟು 116 ಆಟಗಾರರನ್ನು ಕಣಕ್ಕಿಳಿಸಿ ದಾಖಲೆ ಬರೆದಿತ್ತು. ಇದೀಗ ಈ ದಾಖಲೆಯ ಸಂಖ್ಯೆಯನ್ನು ಟೀಮ್ ಇಂಡಿಯಾ ಹಿಂದಿಕ್ಕಿದೆ.

ಬಾಂಗ್ಲಾದೇಶ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಮಯಾಂಕ್ ಯಾದವ್ ಹಾಗೂ ನಿತೀಶ್ ರೆಡ್ಡಿ ಪಾದಾರ್ಪಣೆ ಮಾಡಿದ್ದರು. ಈ ಇಬ್ಬರ ಎಂಟ್ರಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಆಟಗಾರರನ್ನು ಕಣಕ್ಕಿಳಿಸಿದ ಕೀರ್ತಿ ಭಾರತದ ಪಾಲಾಗಿದೆ.

2006 ರಿಂದ ಈವರೆಗೆ 236 ಟಿ20 ಪಂದ್ಯಗಳನ್ನಾಡಿರುವ ಟೀಮ್ ಇಂಡಿಯಾ ಒಟ್ಟು 117 ಆಟಗಾರರಿಗೆ ಅವಕಾಶ ನೀಡಿದೆ. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಆಟಗಾರರನ್ನು ಆಡಿಸಿದ ವಿಶ್ವ ದಾಖಲೆಯನ್ನು ಭಾರತ ತಂಡ ತಮ್ಮದಾಗಿಸಿಕೊಂಡಿದೆ.

ಭಾರತ (117), ಪಾಕಿಸ್ತಾನ್ (116) ಅಲ್ಲದೆ, ಆಸ್ಟ್ರೇಲಿಯಾ ತಂಡವು ಈವರೆಗೆ 111 ಆಟಗಾರರನ್ನು ಕಣಕ್ಕಿಳಿಸಿದೆ. ಅದೇ ರೀತಿ ಶ್ರೀಲಂಕಾ ಪರ 108 ಹಾಗೂ ಇಂಗ್ಲೆಂಡ್ ಪರ 104 ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ನೂರಕ್ಕೂ ಹೆಚ್ಚು ಆಟಗಾರರಿಗೆ ಅವಕಾಶ ನೀಡಿದ ತಂಡಗಳ ಟಾಪ್-5 ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.
