ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್
T20 World Cup 2026: ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಬರೋಬ್ಬರಿ 253 ರನ್ ಬಾರಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್ಗಳಲ್ಲಿ 253 ರನ್ ಕಲೆಹಾಕಿದರೆ, ಇಂಗ್ಲೆಂಡ್ 246 ರನ್ಗಳಿಸಿ 7 ರನ್ಗಳಿಂದ ಸೋಲೊಪ್ಪಿಕೊಂಡಿತು.
Updated on: Mar 06, 2026 | 2:08 PM

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್ಗಳಿಸಿದ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಸನ್ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿತ್ತು.

ಸನ್ರೈಸರ್ಸ್ ಹೈದರಾಬಾದ್ ತಂಡವು ಟಿ20 ಕ್ರಿಕೆಟ್ನಲ್ಲಿ ಒಟ್ಟು 5 ಬಾರಿ 250+ ಸ್ಕೋರ್ಗಳಿಸಿ ಈ ದಾಖಲೆ ನಿರ್ಮಿಸಿದ್ದರು. 287/3 (vs RCB, 2024), 286/6 (vs RR, 2025), 278/3 (vs KKR, 2025), 277/3 (vs MI, 2024), 266/7 (vs DC, 2024). ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

ಭಾರತ ತಂಡವು ಟಿ20 ಕ್ರಿಕೆಟ್ನಲ್ಲಿ ಒಟ್ಟು 6 ಬಾರಿ 250+ ಸ್ಕೋರ್ಗಳಿಸಿದ್ದಾರೆ. 297/6 (vs BAN, 2024), 283/1 (vs SA, 2024), 271/5 (vs NZ, 2026), 260/5 (vs SL, 2017), 256/4 (vs ZIM, 2026), 253/7 (vs ENG, 2026) ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್ಗಳಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.
