ಟೀಮ್ ಇಂಡಿಯಾ ದಾಂಡಿಗರ ಆರ್ಭಟಕ್ಕೆ SRH ತಂಡದ ವಿಶ್ವ ದಾಖಲೆ ಉಡೀಸ್

Updated on: Mar 06, 2026 | 2:08 PM

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಬರೋಬ್ಬರಿ 253 ರನ್​ ಬಾರಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 253 ರನ್​ ಕಲೆಹಾಕಿದರೆ, ಇಂಗ್ಲೆಂಡ್ 246 ರನ್​ಗಳಿಸಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

1 / 5
ಟಿ20 ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಸಹ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡದ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಬರೋಬ್ಬರಿ 253 ರನ್ ಕಲೆಹಾಕಿದ್ದರು. ಈ 253 ರನ್​ಗಳೊಂದಿಗೆ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ.

3 / 5
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್​ಗಳಿಸಿದ ದಾಖಲೆ ಇದೀಗ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಹೆಸರಿನಲ್ಲಿತ್ತು.

4 / 5
ಸನ್​ರೈಸರ್ಸ್ ಹೈದರಾಬಾದ್ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 5 ಬಾರಿ 250+ ಸ್ಕೋರ್​ಗಳಿಸಿ ಈ ದಾಖಲೆ ನಿರ್ಮಿಸಿದ್ದರು. 287/3 (vs RCB, 2024), 286/6 (vs RR, 2025), 278/3 (vs KKR, 2025), 277/3 (vs MI, 2024), 266/7 (vs DC, 2024). ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

5 / 5
ಭಾರತ ತಂಡವು ಟಿ20 ಕ್ರಿಕೆಟ್​ನಲ್ಲಿ ಒಟ್ಟು 6 ಬಾರಿ 250+ ಸ್ಕೋರ್​ಗಳಿಸಿದ್ದಾರೆ. 297/6 (vs BAN, 2024), 283/1 (vs SA, 2024), 271/5 (vs NZ, 2026), 260/5 (vs SL, 2017), 256/4 (vs ZIM, 2026), 253/7 (vs ENG, 2026) ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 250+ ಸ್ಕೋರ್​ಗಳಿಸಿದ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

Follow Us