Rohit Sharma: ಮತ್ತೆ ವಿಶ್ರಾಂತಿ ಬಯಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ..!
TV9 Web | Updated By: ಝಾಹಿರ್ ಯೂಸುಫ್
Updated on:
Jun 17, 2023 | 8:30 PM
India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಜುಲೈ 27 ರಿಂದ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಹಾಗೆಯೇ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.
1 / 10
India vs West Indies: ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
2 / 10
ಐಪಿಎಲ್ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಬಳಿಕ ರಜೆಯ ಮೂಡ್ನಲ್ಲಿ ರೋಹಿತ್ ಶರ್ಮಾ, ಮುಂಬರುವ ಸರಣಿಯ ವೇಳೆ ವಿಶ್ರಾಂತಿ ಬಯಸಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಅನುಮಾನ.
3 / 10
ಇತ್ತ ರೋಹಿತ್ ಶರ್ಮಾ ಹೊರಗುಳಿದರೆ ಮತ್ತೆ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಆಯ್ಕೆ ಸಮಿತಿ ಮುಂದಿರಲಿದೆ. ಹೀಗಾಗಿ ಇನ್ನೂ ಕೂಡ ಈ ಬಗ್ಗೆ ಆಯ್ಕೆ ಸಮಿತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.
4 / 10
ಏಕೆಂದರೆ ವೆಸ್ಟ್ ಇಂಡೀಸ್ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ , 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ. ಇಲ್ಲಿ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುವುದಿಲ್ಲ ಎಂಬುದು ಖಚಿತ.
5 / 10
ಆದರೆ ಅದಕ್ಕೂ ಮುನ್ನ ನಡೆಯಲಿರುವ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಬೇಕಿದೆ. ಇದಾಗ್ಯೂ 2 ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ವಿಶ್ರಾಂತಿ ಬಯಸಿದ್ದಾರೆ ಎಂದು ವರದಿಯಾಗಿದೆ.
6 / 10
ಇತ್ತ ಮುಂಬರುವ ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ ಬಲಿಷ್ಠ ಏಕದಿನ ತಂಡವನ್ನು ರೂಪಿಸಬೇಕಿದೆ. ಇದರ ನಡುವೆ ರೋಹಿತ್ ಶರ್ಮಾ ವಿಶ್ರಾಂತಿ ಬಯಸಿರುವುದು ಆಯ್ಕೆ ಸಮಿತಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.
7 / 10
ಜೂನ್ 26 ರಂದು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಿದ್ದು, ಇದರೊಳಗೆ ವಿಶ್ರಾಂತಿ ಬಗ್ಗೆ ರೋಹಿತ್ ಶರ್ಮಾ ಜೊತೆ ಆಯ್ಕೆ ಸಮಿತಿ ಚರ್ಚಿಸಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
8 / 10
ಹೀಗಾಗಿ ಅಂತಿಮವಾಗಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರಾ ಅಥವಾ ಆಯ್ಕೆ ಸಮಿತಿ ಅವರಿಗೆ ವಿಶ್ರಾಂತಿ ನೀಡಲಿದೆಯಾ ಎಂಬುದು ಜೂನ್ 27 ರಂದು ಬಹಿರಂಗವಾಗಲಿದೆ.
9 / 10
ಒಟ್ಟಿನಲ್ಲಿ ಐಪಿಎಲ್ನಲ್ಲಿ ಸತತ 2 ತಿಂಗಳು ಆಡುವ ಸ್ಟಾರ್ ಆಟಗಾರರು ಟೀಮ್ ಇಂಡಿಯಾ ಸರಣಿಗಳ ವೇಳೆ ವಿಶ್ರಾಂತಿ ಪಡೆಯುತ್ತಿರುವುದು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ.
10 / 10
ಭಾರತ-ವೆಸ್ಟ್ ಇಂಡೀಸ್ ನಡುವಣ ಸರಣಿಯು ಜುಲೈ 12 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು 2 ಟೆಸ್ಟ್ ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ ಜುಲೈ 27 ರಿಂದ 3 ಪಂದ್ಯಗಳ ಏಕದಿನ ಸರಣಿ ಶುರುವಾಗಲಿದೆ. ಹಾಗೆಯೇ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.