AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ಹೊಸ ಇತಿಹಾಸ ಬರೆದ ಶ್ರೇಯಸ್ ಅಯ್ಯರ್

Shreyas Iyer: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟಿ20 ಪಂದ್ಯದಲ್ಲೇ ಶ್ರೇಯಸ್ ಅಯ್ಯರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ (59) ಹಾಗೂ ಶ್ರೇಯಸ್ ಅಯ್ಯರ್ (68) ಅರ್ಧಶತಕ ಸಿಡಿಸಿದ್ದರು. ಈ ಹಾಫ್​ ಸೆಂಚುರಿಗಳೊಂದಿಗೆ ಟೀಮ್ ಇಂಡಿಯಾ 20 ಓವರ್​ಗಳಲ್ಲಿ  7 ವಿಕೆಟ್ ನಷ್ಟಕ್ಕೆ 189 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆದರೆ, ದುರದೃಷ್ಟವಶಾತ್ ಭಾರತದ ಇನ್ನಿಂಗ್ಸ್ ಮುಗಿಯುತ್ತಿದ್ದಂತೆ ಭಾರಿ ಮಳೆ ಬಂದಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲಾಯಿತು.

ಝಾಹಿರ್ ಯೂಸುಫ್
|

Updated on:Jul 02, 2026 | 9:57 AM

Share
ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. (PC: getty images)

1 / 5
ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. (PC: getty images)

2 / 5
ಈ ಭರ್ಜರಿ ಬ್ಯಾಟಿಂಗ್​​ನೊಂದಿಗೆ ಶ್ರೇಯಸ್ ಅಯ್ಯರ್ ಕೇವಲ  38 ಎಸೆತಗಳಲ್ಲಿ ನಾಯಕನಾಗಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಇಂಗ್ಲೆಂಡ್​ನಲ್ಲಿ ಅರ್ಧಶತಕ ಸಿಡಿಸಿದ ಭಾರತ ಟಿ20 ತಂಡದ ಮೊದಲ ನಾಯಕನೆಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡರು. (PC: getty images)

3 / 5
ಅಷ್ಟೇ ಅಲ್ಲದೆ ಇಂಗ್ಲೆಂಡ್​ ವಿರುದ್ಧ ಆಂಗ್ಲರ ನಾಡಿನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್​ಗಳಿಸಿದ್ದು ಭಾರತೀಯ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. (PC: BCCI)

4 / 5
ಆದರೆ ಆಂಗ್ಲರ ನಾಡಿನಲ್ಲಿ ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್​ನಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್​ ಕಲೆಹಾಕಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: getty images)

5 / 5

Published On - 9:23 am, Thu, 2 July 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’

ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್

ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ

ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ

ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ

ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ

ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ