
ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಯಕನಾಗಿ ಇಂಗ್ಲೆಂಡ್ ವಿರುದ್ಧ ಆಡಿದ ಮೊದಲ ಟಿ20 ಪಂದ್ಯದಲ್ಲೇ ಎಂಬುದು ವಿಶೇಷ. ಈ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಅಯ್ಯರ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. (PC: getty images)

ಚೆಸ್ಟರ್-ಲೆ-ಸ್ಟ್ರೀಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೇವಲ 6 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಕ್ರೀಸ್ಗೆ ಆಗಮಿಸಿದ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. (PC: getty images)

ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಶ್ರೇಯಸ್ ಅಯ್ಯರ್ ಕೇವಲ 38 ಎಸೆತಗಳಲ್ಲಿ ನಾಯಕನಾಗಿ ಚೊಚ್ಚಲ ಅರ್ಧಶತಕ ಪೂರೈಸಿದರು. ಈ ಹಾಫ್ ಸೆಂಚುರಿಯೊಂದಿಗೆ ಇಂಗ್ಲೆಂಡ್ನಲ್ಲಿ ಅರ್ಧಶತಕ ಸಿಡಿಸಿದ ಭಾರತ ಟಿ20 ತಂಡದ ಮೊದಲ ನಾಯಕನೆಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡರು. (PC: getty images)

ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧ ಆಂಗ್ಲರ ನಾಡಿನಲ್ಲಿ ಗರಿಷ್ಠ ಸ್ಕೋರ್ಗಳಿಸಿದ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ತಮ್ಮ ಹೆಸರಿಗೆ ಸೇರಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2018 ರಲ್ಲಿ ಕಾರ್ಡಿಫ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 47 ರನ್ಗಳಿಸಿದ್ದು ಭಾರತೀಯ ನಾಯಕನ ಶ್ರೇಷ್ಠ ಸಾಧನೆಯಾಗಿತ್ತು. (PC: BCCI)

ಆದರೆ ಆಂಗ್ಲರ ನಾಡಿನಲ್ಲಿ ನಾಯಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಅಬ್ಬರಿಸಿದ ಶ್ರೇಯಸ್ ಅಯ್ಯರ್ 47 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ನಲ್ಲಿ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ನಾಯಕ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್ ಕಲೆಹಾಕಿದ ಟೀಮ್ ಇಂಡಿಯಾ ಕ್ಯಾಪ್ಟನ್ ಎನಿಸಿಕೊಂಡಿದ್ದಾರೆ. (PC: getty images)
Published On - 9:23 am, Thu, 2 July 26