ಸಿಕ್ಸರ್ಗಳ ಸುರಿಮಳೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ
South Africa vs India: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಒಟ್ಟು 7 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಭಾರತೀಯ ಬ್ಯಾಟರ್ಗಳಿಂದ ಮೂಡಿಬಂದ ಒಟ್ಟು ಸಿಕ್ಸ್ಗಳ ಸಂಖ್ಯೆ 13. ಇದರೊಂದಿಗೆ ಟಿ20 ಕ್ರಿಕೆಟ್ನ ವಿಶ್ವ ದಾಖಲೆಯೊಂದು ಭಾರತ ತಂಡದ ಪಾಲಾಗಿದೆ.
Updated on: Nov 14, 2024 | 9:03 AM

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್ಗಳ ಅಬ್ಬರ ಮುಂದುವರೆದಿದೆ. ಮೊದಲೆರಡು ಪಂದ್ಯಗಳಲ್ಲಿ ಒಟ್ಟು 16 ಸಿಕ್ಸ್ ಬಾರಿಸಿದ್ದ ಭಾರತೀಯ ಬ್ಯಾಟರ್ಗಳು ಇದೀಗ ಮೂರನೇ ಟಿ20 ಪಂದ್ಯದಲ್ಲಿ 13 ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸ್ಗಳೊಂದಿಗೆ 2024 ರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. 2024ರಲ್ಲಿ 21 ಟಿ20 ಪಂದ್ಯಗಳನ್ನಾಡಿರುವ ವಿಂಡೀಸ್ ಬ್ಯಾಟರ್ಗಳು ಒಟ್ಟು 201 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ಯಶಸ್ವಿಯಾಗಿದ್ದಾರೆ.

2024 ರಲ್ಲಿ ಭಾರತ ತಂಡವು ಈವರೆಗೆ 25 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಒಟ್ಟು 214 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.

ವಿಶೇಷ ಎಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಹೊರತುಪಡಿಸಿ ಈ ವರ್ಷ ಬೇರೆ ಯಾವುದೇ ತಂಡ ಟಿ20 ಕ್ರಿಕೆಟ್ನಲ್ಲಿ 200+ ಸಿಕ್ಸ್ ಸಿಡಿಸಿಲ್ಲ. ಇದೀಗ ಇನ್ನೂರು ಸಿಕ್ಸ್ಗಳ ಸಾಧನೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿದ್ದು, 2024ರ ಅಂತ್ಯದವರೆಗೆ ಈ ವರ್ಲ್ಡ್ ರೆಕಾರ್ಡ್ ಅನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

ಇನ್ನು ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ತಿಲಕ್ ವರ್ಮಾ 56 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್ಗಳಲ್ಲಿ 207 ರನ್ಗಳಿಸಿ 11 ರನ್ಗಳಿಂದ ಸೋಲೊಪ್ಪಿಕೊಂಡಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




