ಸಿಕ್ಸರ್​ಗಳ ಸುರಿಮಳೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ

|

Updated on: Nov 14, 2024 | 9:03 AM

South Africa vs India: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ ಒಟ್ಟು 7 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಅಲ್ಲದೆ ಈ ಪಂದ್ಯದಲ್ಲಿ ಭಾರತೀಯ ಬ್ಯಾಟರ್​ಗಳಿಂದ ಮೂಡಿಬಂದ ಒಟ್ಟು ಸಿಕ್ಸ್​ಗಳ ಸಂಖ್ಯೆ 13. ಇದರೊಂದಿಗೆ ಟಿ20 ಕ್ರಿಕೆಟ್​ನ ವಿಶ್ವ ದಾಖಲೆಯೊಂದು ಭಾರತ ತಂಡದ ಪಾಲಾಗಿದೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳ ಅಬ್ಬರ ಮುಂದುವರೆದಿದೆ. ಮೊದಲೆರಡು ಪಂದ್ಯಗಳಲ್ಲಿ ಒಟ್ಟು 16 ಸಿಕ್ಸ್ ಬಾರಿಸಿದ್ದ ಭಾರತೀಯ ಬ್ಯಾಟರ್​ಗಳು ಇದೀಗ ಮೂರನೇ ಟಿ20 ಪಂದ್ಯದಲ್ಲಿ 13 ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸ್​ಗಳೊಂದಿಗೆ 2024 ರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು. 2024ರಲ್ಲಿ 21 ಟಿ20 ಪಂದ್ಯಗಳನ್ನಾಡಿರುವ ವಿಂಡೀಸ್ ಬ್ಯಾಟರ್​ಗಳು ಒಟ್ಟು 201 ಸಿಕ್ಸ್​ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಭಾರತೀಯ ಬ್ಯಾಟ್ಸ್​ಮನ್​​ಗಳು ಯಶಸ್ವಿಯಾಗಿದ್ದಾರೆ.

3 / 5
2024 ರಲ್ಲಿ ಭಾರತ ತಂಡವು ಈವರೆಗೆ 25 ಟಿ20 ಪಂದ್ಯಗಳನ್ನಾಡಿದೆ. ಈ ವೇಳೆ ಒಟ್ಟು 214 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಈ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.

4 / 5
ವಿಶೇಷ ಎಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ಅನ್ನು ಹೊರತುಪಡಿಸಿ ಈ ವರ್ಷ ಬೇರೆ ಯಾವುದೇ ತಂಡ ಟಿ20 ಕ್ರಿಕೆಟ್​ನಲ್ಲಿ 200+ ಸಿಕ್ಸ್ ಸಿಡಿಸಿಲ್ಲ. ಇದೀಗ ಇನ್ನೂರು ಸಿಕ್ಸ್​ಗಳ ಸಾಧನೆಯೊಂದಿಗೆ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿದ್ದು, 2024ರ ಅಂತ್ಯದವರೆಗೆ ಈ ವರ್ಲ್ಡ್ ರೆಕಾರ್ಡ್ ಅನ್ನು ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.

5 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ತಿಲಕ್ ವರ್ಮಾ 56 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 107 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 207 ರನ್​ಗಳಿಸಿ 11 ರನ್​ಗಳಿಂದ ಸೋಲೊಪ್ಪಿಕೊಂಡಿದೆ.