ಏಷ್ಯಾಕಪ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಭಾರತ
Asia Cup 2025 India vs Pakistan: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಕಲೆಹಾಕಿದ್ದು ಕೇವಲ 146 ರನ್ಗಳು ಮಾತ್ರ. ಈ ಗುರಿಯನ್ನು 19.4 ಓವರ್ಗಳಲ್ಲಿ ಚೇಸ್ ಮಾಡಿ ಟೀಮ್ ಇಂಡಿಯಾ 5 ವಿಕೆಟ್ಗಳ ಜಯ ಸಾಧಿಸಿ 9ನೇ ಬಾರಿ ಏಷ್ಯಾಕಪ್ ಮುಡಿಗೇರಿಸಿಕೊಂಡಿದೆ.
Updated on: Sep 30, 2025 | 9:30 AM

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಈ ಬಾರಿಯ ಟೂರ್ನಿಯಲ್ಲಿ ಸತತ 7 ಪಂದ್ಯಗಳನ್ನು ಗೆಲ್ಲುವ ಮೂಲಕ. ಅಂದರೆ ಟೀಮ್ ಇಂಡಿಯಾ ಈ ಬಾರಿ ಒಂದೇ ಒಂದು ಪಂದ್ಯ ಸೋಲದೇ ಏಷ್ಯಾಕಪ್ ಅನ್ನು ಮುಡಿಗೇರಿಸಿಕೊಂಡಿದೆ.

ಈ 7 ಗೆಲುವುಗಳೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಇತಿಹಾಸದಲ್ಲೇ 50 ಪಂದ್ಯಗಳಲ್ಲಿ ಜಯ ಸಾಧಿಸಿದ ಮೊದಲ ತಂಡ ಎನಿಸಿಕೊಂಡಿದೆ. ಅಲ್ಲದೆ ಏಷ್ಯಾಕಪ್ನಲ್ಲಿ ಅತ್ಯಧಿಕ ಗೆಲುವು ಕಂಡ ತಂಡವೆಂಬ ಹಿರಿಮೆಗೂ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು.

1984 ರಿಂದ ಶುರುವಾದ ಏಷ್ಯಾಕಪ್ ಟೂರ್ನಿಯಲ್ಲಿ ಶ್ರೀಲಂಕಾ ತಂಡವು ಒಟ್ಟು 47 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದೆ. ಈ ಗೆಲುವುಗಳೊಂದಿಗೆ ಏಷ್ಯಾಕಪ್ ಟೂರ್ನಿಯಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದ ತಂಡವೆಂಬ ದಾಖಲೆಯನ್ನು ನಿರ್ಮಿಸಿತ್ತು. ಇದೀಗ ಈ ದಾಖಲೆ ಅಳಿಸಿ ಹಾಕುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

ಈ ಬಾರಿಯ ಟೂರ್ನಿಯಲ್ಲಿ 7 ಜಯ ಸಾಧಿಸುವುದರೊಂದಿಗೆ ಏಷ್ಯಾಕಪ್ನಲ್ಲಿನ ಟೀಮ್ ಇಂಡಿಯಾದ ಗೆಲುವು ಅರ್ಧಶತಕ ಮುಟ್ಟಿದೆ. ಈ ಮೂಲಕ ಏಷ್ಯಾಕಪ್ ಇತಿಹಾಸದಲ್ಲೇ 50 ಗೆಲುವು ದಾಖಲಿಸಿದ ಮೊದಲ ತಂಡವೆಂಬ ಭರ್ಜರಿ ದಾಖಲೆಯೊಂದನ್ನು ಭಾರತ ತಂಡ ತನ್ನದಾಗಿಸಿಕೊಂಡಿದೆ.

ಇದೀಗ ಚಾಂಪಿಯನ್ ಪಟ್ಟದೊಂದಿಗೆ ಏಷ್ಯಾಕಪ್ ಮುಗಿಸಿರುವ ಟೀಮ್ ಇಂಡಿಯಾ ಫೆಬ್ರವರಿಯಲ್ಲಿ ಟಿ20 ವಿಶ್ವಕಪ್ ಅನ್ನು ಸಹ ಆಡಲಿದೆ. ಪ್ರಸ್ತುತ ತಂಡವು ಭರ್ಜರಿ ಪ್ರದರ್ಶನ ನೀಡಿರುವ ಕಾರಣ, ಮುಂಬರುವ ಟಿ20 ವಿಶ್ವಕಪ್ನಲ್ಲೂ ಇದೇ ಬಳಗವನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಮೂಲಕ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ20 ವಿಶ್ವಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.
