ಸಪ್ತ ಅಸ್ತ್ರಗಳೊಂದಿಗೆ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ
India vs Bangladesh, 2nd T20I: ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಅಮೋಘ ಗೆಲುವು ದಾಖಲಿಸಿದೆ. ಈ ಮ್ಯಾಚ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 135 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 86 ರನ್ ಗಳ ಭರ್ಜರಿ ಜಯ ಸಾಧಿಸಿದೆ.
1 / 6
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದ ಮೂಲಕ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ಬರೆದಿದೆ. ಅದು 7 ಬೌಲರ್‌ಗಳನ್ನು ಬಳಸಿ ಯಶಸ್ವಿಯಾಗುವ ಮೂಲಕ ಎಂಬುದು ವಿಶೇಷ.
2 / 6
ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ನಿತೀಶ್ ರೆಡ್ಡಿ (74) ಹಾಗೂ ರಿಂಕು ಸಿಂಗ್ (53) ಸ್ಪೋಟಕ ಅರ್ಧಶತಕ ಸಿಡಿಸಿದ್ದರು. ಈ ಹಾಫ್ ಸೆಂಚುರಿಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು.
3 / 6
222 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ಬ್ಯಾಟರ್ಗಳನ್ನು ಕಟ್ಟಿ ಹಾಕಲು ಟೀಮ್ ಇಂಡಿಯಾ ನಾಯಕ ಸಪ್ತ ಅಸ್ತ್ರಗಳನ್ನು ಪ್ರಯೋಗಿಸಿದ್ದರು. ಅಂದರೆ 7 ಬೌಲರ್‌ಗಳನ್ನು ಬಳಸಿ ದಾಳಿ ಸಂಘಟಿಸಿದ್ದರು.
4 / 6
ಹೀಗೆ ದಾಳಿ ಸಂಘಟಿಸಿದ ಬೌಲರ್‌ಗಳೆಲ್ಲರೂ ವಿಕೆಟ್ ಪಡೆದಿರುವುದು ವಿಶೇಷ. ಅಂದರೆ, ಇದೇ ಮೊದಲ ಬಾರಿಗೆ ಟಿ20 ಪಂದ್ಯವೊಂದರಲ್ಲಿ ಭಾರತದ ಪರ ಬೌಲಿಂಗ್ ಮಾಡಿದ ಎಲ್ಲರೂ ವಿಕೆಟ್‌ಗಳನ್ನು ಕಬಳಿಸಿದ್ದಾರೆ.
5 / 6
3 ಓವರ್ ಎಸೆದ ಅರ್ಷದೀಪ್ ಸಿಂಗ್ 26 ರನ್ ನೀಡಿ 1 ವಿಕೆಟ್ ಪಡೆದರೆ, ನಿತೀಶ್ ರೆಡ್ಡಿ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿದ್ದಾರೆ. ಇನ್ನು ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಉರುಳಿಸಿದರೆ, ವಾಷಿಂಗ್ಟನ್ ಸುಂದರ್, ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್ ಹಾಗೂ ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
6 / 6
ಈ ಮೂಲಕ ಟಿ20 ಅಂತಾರಾಷ್ಟ್ರೀಯ ಪಂದ್ಯವೊಂದರಲ್ಲಿ ಭಾರತದ 7 ಬೌಲರ್ಗಳು ವಿಕೆಟ್ ಕಬಳಿಸಿ ಹೊಸ ವಿಶ್ವ ದಾಖಲೆ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ 222 ರನ್ಗಳನ್ನು ಚೇಸ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 135 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 2ನೇ ಟಿ20 ಪಂದ್ಯವನ್ನು ಟೀಮ್ ಇಂಡಿಯಾ 86 ರನ್ಗಳಿಂದ ಗೆದ್ದುಕೊಂಡಿದೆ.