AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

Team India's World Record: ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಅದು ಕೂಡ ಬ್ಯಾಕ್ ಟು ಬ್ಯಾಕ್ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಭಾರತ ತಂಡ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on: Feb 08, 2026 | 9:56 AM

Share
T20 World Cup 2026: ಟಿ20 ವಿಶ್ವಕಪ್​ 2026ರ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾ (Team India) ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸತತ ಗೆಲುವಿನೊಂದಿಗೆ. ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಪಂದ್ಯಗಳನ್ನು ಗೆದ್ದ ವರ್ಲ್ಡ್​ ರೆಕಾರ್ಡ್ ಟೀಮ್ ಇಂಡಿಯಾ ಪಾಲಾಗಿದೆ.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ  ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತ ತಂಡವು ಈ ಸಾಧನೆ ಮಾಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 161 ರನ್​ಗಳಿಸಿತು. ಈ ಗುರಿಯನ್ನು ಬೆನ್ನತ್ತಿದ ಯುಎಸ್​ಎ ತಂಡವು 20 ಓವರ್​ಗಳಲ್ಲಿ 132 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಭಾರತ ತಂಡವು 29 ರನ್​ಗಳ ಜಯ ಸಾಧಿಸಿದೆ.

2 / 5
ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತ್ಯಧಿಕ ಪಂದ್ಯಗಳನ್ನು ಗೆದ್ದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಇದ್ದದ್ದು ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿ ಎಂಬುದು ವಿಶೇಷ.

3 / 5
ಸೌತ್ ಆಫ್ರಿಕಾ ತಂಡವು 2024 ರಲ್ಲಿ ಸತತವಾಗಿ 8 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಬ್ಯಾಕ್ ಟು ಬ್ಯಾಕ್ ಅತೀ ಹೆಚ್ಚು ಮ್ಯಾಚ್​ಗಳನ್ನು ಗೆದ್ದ ತಂಡವೆಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಟೀಮ್ ಇಂಡಿಯಾ ಮುರಿದಿದೆ.

4 / 5
2024 ರಲ್ಲಿ ಸತತವಾಗಿ 8 ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ 2026ರ ಟಿ20 ವಿಶ್ವಕಪ್​ನ ಮೊದಲ ಮ್ಯಾಚ್​ನಲ್ಲೇ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸತತವಾಗಿ ಅತೀ ಹೆಚ್ಚು ಮ್ಯಾಚ್​ಗಳನ್ನು ಗೆದ್ದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ

ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ