ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

Updated on: Feb 01, 2026 | 7:38 AM

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 48 ರನ್​ಗಳಿಂದ ಗೆದ್ದು ಬೀಗಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ 7 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ 8 ವಿಕೆಟ್​ಗಳ ಗೆಲುವು ದಾಖಲಿಸಿತು. ನಾಲ್ಕನೇ ಪಂದ್ಯವನ್ನು ನ್ಯೂಝಿಲೆಂಡ್ 50 ರನ್​ಗಳಿಂದ ಗೆದ್ದುಕೊಂಡರೆ, ಕೊನೆಯ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 46 ರನ್​ಗಳ ಗೆಲುವು ದಾಖಲಿಸಿದೆ.

1 / 5
ಟಿ20 ಕ್ರಿಕೆಟ್​​ನಲ್ಲಿ ಭಾರತೀಯ ಬ್ಯಾಟರ್​ಗಳು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಸಿಡಿಲಬ್ಬರದೊಂದಿಗೆ. ಅಂದರೆ ನ್ಯೂಝಿಲೆಂಡ್ ವಿರುದ್ಧ ಐದನೇ ಟಿ20 ಪಂದ್ಯದಲ್ಲಿ 271 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ದಾಖಲೆಯೊಂದನ್ನು ನಿರ್ಮಿಸಿದೆ.

2 / 5
ತಿರುವನಂತಪುರದ ಗ್ರೀನ್​ಫೀಲ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಇಶಾನ್ ಕಿಶನ್ (103) ಶತಕ ಸಿಡಿಸಿದರೆ, ಸೂರ್ಯಕುಮಾರ್ ಯಾದವ್ (63) ಅರ್ಧಶತಕ ಬಾರಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 271 ರನ್ ಕಲೆಹಾಕಿತು.

3 / 5
ಈ 271 ರನ್​ಗಳೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಮೂರು 270 ರನ್​ಗಳಿಗಿಂತ ಅಧಿಕ ಸ್ಕೋರ್​ಗಳಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿತು. ಭಾರತ ತಂಡವನ್ನು ಹೊರತುಪಡಿಸಿ ವಿಶ್ವದ ಯಾವುದೇ ತಂಡ ಮೂರು  ಬಾರಿ 270 ಕ್ಕಿಂತ ಅಧಿಕ ಸ್ಕೋರ್​ ಗಳಿಸಿಲ್ಲ.

4 / 5
ಭಾರತ ತಂಡವು 2024 ರಲ್ಲಿ ಬಾಂಗ್ಲಾದೇಶ್ ವಿರುದ್ಧ 20 ಓವರ್​ಗಳಲ್ಲಿ 297 ರನ್ ಬಾರಿಸಿದ್ದರು. ಹಾಗೆಯೇ ಸೌತ್ ಆಫ್ರಿಕಾ ವಿರುದ್ಧ 283 ರನ್​ಗಳ ಇನಿಂಗ್ಸ್ ಆಡಿದ್ದರು. ಇದೀಗ ನ್ಯೂಝಿಲೆಂಡ್ ವಿರುದ್ಧ 271 ರನ್​ ಪೇರಿಸುವ ಮೂಲಕ ಟೀಮ್ ಇಂಡಿಯಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೂರು ಬಾರಿ 270+ ಸ್ಕೋರ್​ಗಳಿಸಿದ ವಿಶ್ವದ ಮೊದಲ ತಂಡ ಎನಿಸಿಕೊಂಡಿದೆ.

5 / 5
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ 272 ರನ್​ಗಳ ಕಠಿಣ ಗುರಿ ಬೆನ್ನತ್ತಿದ ನ್ಯೂಝಿಲೆಂಡ್ ತಂಡವು ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಇದಾಗ್ಯೂ 19.4 ಓವರ್​​ಗಳಲ್ಲಿ ಕಿವೀಸ್ ಪಡೆಯನ್ನು 225 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಟೀಮ್ ಇಂಡಿಯಾ 46 ರನ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.