AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ವಿಶ್ವ ದಾಖಲೆ… ಟೀಮ್ ಇಂಡಿಯಾದ ವರ್ಲ್ಡ್​ ರೆಕಾರ್ಡ್ ಚೇಸಿಂಗ್

India vs New Zealand: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್​ನೊಂದಿಗೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. 

ಝಾಹಿರ್ ಯೂಸುಫ್
|

Updated on: Jan 26, 2026 | 6:54 AM

Share
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಕೇವಲ 10 ಓವರ್​​ಗಳ ಮೂಲಕ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಕೇವಲ 10 ಓವರ್​ಗಳಲ್ಲಿ ಪಂದ್ಯ ಮುಗಿಸಿ ಭಾರತ ತಂಡ ಹೊಸ ಇತಿಹಾಸ ನಿರ್ಮಿಸಿದೆ.

1 / 6
ಗುವಾಹಟಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿದ್ದರು.

2 / 6
154 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 20 ಎಸೆತಗಳನ್ನು ಎದುರಿಸಿದ ಅಭಿಷೇಕ್ 68 ರನ್ ಬಾರಿಸಿದರೆ, ಸೂರ್ಯಕುಮಾರ್ 26 ಎಸೆತಗಳಲ್ಲಿ 57 ರನ್​ ಚಚ್ಚಿದರು.

3 / 6
ಈ ಇಬ್ಬರ ಸಿಡಿಲಬ್ಬರ ಅರ್ಧಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ 155 ರನ್​ ಬಾರಿಸಿ 8 ವಿಕೆಟ್​ಗಳ ವಿಜಯ ಸಾಧಿಸಿತು. ಈ ಗೆಲುವಿನೊಂದಿಗೆ ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳ ಪೈಕಿ ಅತೀ ಕಡಿಮೆ ಎಸೆತಗಳಲ್ಲಿ 150+ ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು.

4 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾ 13.5 ಓವರ್​ಗಳಲ್ಲಿ 150+ ಸ್ಕೋರ್ ಬೆನ್ನತ್ತಿ ಗೆಲುವು ದಾಖಲಿಸಿದ್ದರು. ಈ ಮೂಲಕ 37 ಎಸೆತಗಳನ್ನು ಬಾಕಿಯಿರಿಸಿ 150 ಕ್ಕಿಂತ ಹೆಚ್ಚು ರನ್​ಗಳನ್ನು ಚೇಸ್ ಮಾಡಿದ ವಿಶ್ವ ದಾಖಲೆ ಬರೆದಿದ್ದರು.

5 / 6
ಇದೀಗ ಟೀಮ್ ಇಂಡಿಯಾ ಬರೋಬ್ಬರಿ 60 ಎಸೆತಗಳನ್ನು ಬಾಕಿಯಿರಿಸಿ 150+ ರನ್ ಚೇಸಿಂಗ್ ಮಾಡಿ ಗೆದ್ದಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಓವರ್​ಗಳಲ್ಲಿ 150 ಕ್ಕಿಂತ ಹೆಚ್ಚಿನ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ.

6 / 6