ಐಪಿಎಲ್ ಗೆದ್ದು ವೈವಾಹಿಕ ಜೀವನಕ್ಕೆ ಕಾಲಿರಿಸಿದ ಟೀಂ ಇಂಡಿಯಾ ಆಟಗಾರ
Venkatesh Iyer: 17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
1 / 7
17 ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಆಟಗಾರ ವೆಂಕಟೇಶ್ ಅಯ್ಯರ್ ಇಂದು ಅಂದರೆ, ಜೂನ್ 2 ರಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
2 / 7
ತಮ್ಮ ಬಹುದಿನದ ಗೆಳತಿ ಶ್ರುತಿ ರಘುನಾಥನ್ ಅವರೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ ಅಯ್ಯರ್, ಐಪಿಎಲ್ಗಾಗಿ ತಮ್ಮ ಮದುವೆಯನ್ನು ಮುಂದೂಡಿದ್ದರು. ಆದರೀಗ ತಂಡವನ್ನು ಚಾಂಪಿಯನ್ ಮಾಡಿದ ಬಳಿಕ ಸಪ್ತಪದಿ ತುಳಿದಿದ್ದಾರೆ.
3 / 7
ವೆಂಕಟೇಶ್ ಅಯ್ಯರ್ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಶ್ರುತಿ ರಘುನಾಥನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಯ್ಯರ್ ತಮ್ಮ ನಿಶ್ಚಿತಾರ್ಥದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಮಾಹಿತಿಯನ್ನು ನೀಡಿದ್ದರು.
4 / 7
ಈ ಬಾರಿಯ ಐಪಿಎಲ್‌ನಲ್ಲಿ ವೆಂಕಟೇಶ್ ಅಯ್ಯರ್ ಪ್ರದರ್ಶನದ ಬಗ್ಗೆ ಹೇಳುವುದಾದರೆ, ಈ ಸೀಸನ್‌ನಲ್ಲಿ 15 ಪಂದ್ಯಗಳನ್ನು ಆಡಿದ ಅಯ್ಯರ್, 46.25 ರ ಸರಾಸರಿಯಲ್ಲಿ 370 ರನ್ ಕಲೆಹಾಕಿದ್ದರು. ಇದರಲ್ಲಿ 4 ಅರ್ಧಶತಕಗಳು ಸೇರಿದ್ದವು.
5 / 7
ಇದಲ್ಲದೆ ಈ ಸೀಸನ್‌ನಲ್ಲಿ ಕೆಕೆಆರ್ ತಂಡಕ್ಕೆ ಮ್ಯಾಚ್ ವಿನ್ನರ್ ಪಾತ್ರವನ್ನು ನಿರ್ವಹಿಸಿದ್ದ ವೆಂಕಟೇಶ್ ಅಯ್ಯರ್, ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲೂ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಚಾಂಪಿಯನ್ ಮಾಡಿದ್ದರು.
6 / 7
ವೆಂಕಟೇಶ್ ಅಯ್ಯರ್ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. ಕಳೆದ ವರ್ಷ ಅಂದರೆ 2022 ರಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಅವರು ಅಂದಿನಿಂದ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇದುವರೆಗೆ ಟೀಂ ಇಂಡಿಯಾ ಪರ ಅಯ್ಯರ್ 2 ಏಕದಿನ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದಾರೆ.
7 / 7
ಇದರಲ್ಲಿ ಅವರು ಏಕದಿನದಲ್ಲಿ 24 ರನ್ ಗಳಿಸಿದ್ದರೆ, ಟಿ20ಯಲ್ಲಿ 133 ರನ್ ಬಾರಿಸಿದ್ದಾರೆ. ಬ್ಯಾಟಿಂಗ್ ಜೊತೆಗೆ ಬೌಲಿಂಗ್ನಲ್ಲೂ ಮ್ಯಾಜಿಕ್ ಮಾಡಿರುವ ಅವರ ಹೆಸರಿನಲ್ಲಿ 5 ವಿಕೆಟ್‌ಗಳು ಸಹ ಇವೆ. 2021 ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ ಅಯ್ಯರ್, ಇಲ್ಲಿಯವರೆಗೆ 50 ಪಂದ್ಯಗಳಲ್ಲಿ 1326 ರನ್ ಮತ್ತು 3 ವಿಕೆಟ್ ಪಡೆದಿದ್ದಾರೆ.