ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!
Team India: ಭಾರತ ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಈ ವರ್ಷ ನಿವೃತ್ತಿ ಘೋಷಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದರೆ, ಮೂವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ. ಹೀಗೆ 2024 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಭಾರತದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...
Updated on: Aug 25, 2024 | 10:53 AM

ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 2024 ರಲ್ಲಿ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರರ ಸಂಖ್ಯೆ 8ಕ್ಕೇರಿದೆ. ಇವರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮಾತ್ರ ವಿದಾಯ ಹೇಳಿದ್ದಾರೆ. ಈ ವರ್ಷ ನಿವೃತ್ತಿ ಘೋಷಿಸಿರುವ ಭಾರತೀಯ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

ಸೌರಭ್ ತಿವಾರಿ: ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ ಸೌರಭ್ ತಿವಾರಿ ಕೂಡ ಇದೇ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 17 ವರ್ಷಗಳ ತಮ್ಮ ಕ್ರಿಕೆಟ್ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ.

ವರೋನ್ ಆರೋನ್: ಟೀಮ್ ಇಂಡಿಯಾ ವೇಗಿ ವರೋನ್ ಆರೋನ್ ಕೂಡ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆರೋನ್ ಭಾರತದ ಪರ 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

ದಿನೇಶ್ ಕಾರ್ತಿಕ್: ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 2004 ರಲ್ಲಿ ಭಾರತದ ಪರ ಪಾದಾರ್ಪಣೆ ಮಾಡುವ ಮೂಲಕ ಇಂಟರ್ನ್ಯಾಷನಲ್ ಕೆರಿಯರ್ ಆರಂಭಿಸಿದ್ದ ಡಿಕೆ ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಐಪಿಎಲ್ಗೂ ಗುಡ್ ಬೈ ಹೇಳಿದ್ದಾರೆ.

ಕೇದಾರ್ ಜಾಧವ್: ಭಾರತದ ಪರ 73 ಏಕದಿನ ಪಂದ್ಯಗಳನ್ನಾಡಿರುವ ಕೇದಾರ್ ಜಾಧವ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಈ ಮೂಲಕ 10 ವರ್ಷಗಳ ತಮ್ಮ ಇಂಟರ್ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ.

ಶಿಖರ್ ಧವನ್: ಟೀಮ್ ಇಂಡಿಯಾದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ನಿವೃತ್ತಿ ಘೋಷಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೂರು ಸ್ವರೂಪಗಳ ಕ್ರಿಕೆಟ್ಗೆ ವಿದಾಯ ಹೇಳುತ್ತಿರುವುದಾಗಿ ಶಿಖರ್ ಧವನ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದಾರೆ.

ರೋಹಿತ್ ಶರ್ಮಾ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸಹ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಚುಟುಕು ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ತೊಡಗಿಸಿಕೊಂಡಿರುವ ಹಿಟ್ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳುವ ಸಾಧ್ಯತೆಯಿದೆ.

ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಸಹ ಟಿ20 ವಿಶ್ವಕಪ್ ಬಳಿಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದಾಗ್ಯೂ ಜಡೇಜಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಮುಂದುವರೆದಿದ್ದಾರೆ.




