ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

Team India: ಭಾರತ ತಂಡವನ್ನು ಪ್ರತಿನಿಧಿಸಿದ 8 ಆಟಗಾರರು ಈ ವರ್ಷ ನಿವೃತ್ತಿ ಘೋಷಿಸಿದ್ದಾರೆ. ಈ ಎಂಟು ಆಟಗಾರರಲ್ಲಿ ಐವರು ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದರೆ, ಮೂವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ವೃತ್ತಿಜೀವನ ಅಂತ್ಯಗೊಳಿಸಿದ್ದಾರೆ. ಹೀಗೆ 2024 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಭಾರತದ 8 ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Aug 25, 2024 | 10:53 AM

ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 2024 ರಲ್ಲಿ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ಆಟಗಾರರ ಸಂಖ್ಯೆ 8ಕ್ಕೇರಿದೆ. ಇವರಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಮಾತ್ರ ವಿದಾಯ ಹೇಳಿದ್ದಾರೆ. ಈ ವರ್ಷ ನಿವೃತ್ತಿ ಘೋಷಿಸಿರುವ ಭಾರತೀಯ ಆಟಗಾರರು ಯಾರೆಲ್ಲಾ ಎಂದು ನೋಡುವುದಾದರೆ...

1 / 9
ಸೌರಭ್ ತಿವಾರಿ: ಭಾರತದ ಪರ 3 ಏಕದಿನ ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ ಸೌರಭ್ ತಿವಾರಿ ಕೂಡ ಇದೇ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 17 ವರ್ಷಗಳ ತಮ್ಮ ಕ್ರಿಕೆಟ್ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ.

2 / 9
ವರೋನ್ ಆರೋನ್: ಟೀಮ್ ಇಂಡಿಯಾ ವೇಗಿ ವರೋನ್ ಆರೋನ್ ಕೂಡ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಆರೋನ್ ಭಾರತದ ಪರ 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ.

3 / 9
ದಿನೇಶ್ ಕಾರ್ತಿಕ್: ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 2004 ರಲ್ಲಿ ಭಾರತದ ಪರ ಪಾದಾರ್ಪಣೆ ಮಾಡುವ ಮೂಲಕ ಇಂಟರ್​ನ್ಯಾಷನಲ್ ಕೆರಿಯರ್ ಆರಂಭಿಸಿದ್ದ ಡಿಕೆ ಮೂರು ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಹಾಗೆಯೇ ಐಪಿಎಲ್​ಗೂ ಗುಡ್ ಬೈ ಹೇಳಿದ್ದಾರೆ.

4 / 9
ಕೇದಾರ್ ಜಾಧವ್: ಭಾರತದ ಪರ 73 ಏಕದಿನ ಪಂದ್ಯಗಳನ್ನಾಡಿರುವ ಕೇದಾರ್ ಜಾಧವ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಈ ಮೂಲಕ 10 ವರ್ಷಗಳ ತಮ್ಮ ಇಂಟರ್​ನ್ಯಾಷನಲ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ.

5 / 9
ಶಿಖರ್ ಧವನ್: ಟೀಮ್ ಇಂಡಿಯಾದ ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಆಗಸ್ಟ್ 24 ರಂದು ನಿವೃತ್ತಿ ಘೋಷಿಸಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಮೂರು ಸ್ವರೂಪಗಳ ಕ್ರಿಕೆಟ್​ಗೆ ವಿದಾಯ ಹೇಳುತ್ತಿರುವುದಾಗಿ ಶಿಖರ್ ಧವನ್ ತಿಳಿಸಿದ್ದಾರೆ.

6 / 9
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ ಫೈನಲ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಅವರು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

7 / 9
ರೋಹಿತ್ ಶರ್ಮಾ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸಹ ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ಚುಟುಕು ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಏಕದಿನ ಮತ್ತು ಟೆಸ್ಟ್ ತಂಡದಲ್ಲಿ ತೊಡಗಿಸಿಕೊಂಡಿರುವ ಹಿಟ್​ಮ್ಯಾನ್ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳುವ ಸಾಧ್ಯತೆಯಿದೆ.

8 / 9
ರವೀಂದ್ರ ಜಡೇಜಾ: ಟೀಮ್ ಇಂಡಿಯಾದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಸಹ ಟಿ20 ವಿಶ್ವಕಪ್ ಬಳಿಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದಾಗ್ಯೂ ಜಡೇಜಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್​ನಲ್ಲಿ ಮುಂದುವರೆದಿದ್ದಾರೆ.

9 / 9
Follow us
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ

ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ

ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ

ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್

ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ

ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್

ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ

Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ