- Kannada News Photo gallery Cricket photos Team India did not waste any time they started training on Friday for the IND vs SA first T20I
IND vs SA 1st T20I: ವಿಶ್ರಾಂತಿ ಕೂಡ ಪಡೆದುಕೊಳ್ಳದೆ ಆಫ್ರಿಕಾದಲ್ಲಿ ಅಭ್ಯಾಸಕ್ಕಿಳಿದ ಭಾರತೀಯ ಆಟಗಾರರು
Team India Practice in South Africa: ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಡಿಸೆಂಬರ್ 10 ರಂದು ಪ್ರೋಟೀಸ್ ವಿರುದ್ಧ ಮೊದಲ ಟಿ20 ಆಡುವ ಮೂಲಕ ತಮ್ಮ ಅಭಿಯಾನವನ್ನು ಆರಂಭಿಸಲಿದ್ದಾರೆ. ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ವಿಶ್ರಾಂತಿ ಕೂಡ ಪಡೆದುಕೊಳ್ಳದೆ ಅಭ್ಯಾಸಕ್ಕಿಳಿದಿದ್ದಾರೆ.
Updated on: Dec 09, 2023 | 6:52 AM

ಭಾರತ ಕ್ರಿಕೆಟ್ ತಂಡದ ಆಟಗಾರರು ದಕ್ಷಿಣ ಆಫ್ರಿಕಾದ ಡರ್ಬನ್ ತಲುಪಿದ ನಂತರ ಒಂದುಚೂರೂ ಸಮಯವನ್ನು ವ್ಯರ್ಥ ಮಾಡದೆ ಮೂರು ಪಂದ್ಯಗಳ ಸರಣಿಯ ಮೊದಲ T20I ಗಾಗಿ ತಮ್ಮ ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಬಿಸಿಸಿಐ ತಮ್ಮ ಅಧಿಕೃತ X ಖಾತೆಯಲ್ಲಿ ಅಭ್ಯಾಸದ ಫೋಟೋ ಹಂಚಿಕೊಂಡಿದೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಡಿಸೆಂಬರ್ 10 ರಂದು ಪ್ರೋಟೀಸ್ ವಿರುದ್ಧ ಮೊದಲ ಟಿ20 ಆಡುವ ಮೂಲಕ ತಮ್ಮ ಅಭಿಯಾನವನ್ನು ಆರಂಭಿಸಲಿದ್ದಾರೆ. ಇದು ಒಟ್ಟು ಮೂರು ಪಂದ್ಯಗಳ ಟಿ20 ಸರಣಿ ಆಗಿದೆ. ನಂತರ ಕೆಎಲ್ ರಾಹುಲ್ ನಾಯಕತ್ವದಲ್ಲಿ ಮೂರು ಏಕದಿನ ಮತ್ತು ರೋಹಿತ್ ಶರ್ಮಾ ಕ್ಯಾಪ್ಟನ್ಸಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಭಾರತ-ದ. ಆಫ್ರಿಕಾ ಮೊದಲ T20I ಯಲ್ಲಿ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸುವ ಜವಾಬ್ದಾರಿಯನ್ನು ಹೊರಲಿದ್ದಾರೆ ಎನ್ನಲಾಗಿದೆ. ಸ್ಟಾರ್ ಸ್ಪೋರ್ಟ್ಸ್‌ನ ಫಾಲೋ ದಿ ಬ್ಲೂಸ್ ಪ್ರಕಾರ, ಈ ಇಬ್ಬರು ಮೊದಲು ನೆಟ್ಸ್‌ನಲ್ಲಿ ಅಭ್ಯಾಸ ಮಾಡಲು ಪ್ರಾರಂಭಿಸಿದ್ದಾರೆ.

ಗಿಲ್-ಜೈಸ್ವಾಲ್ ನಂತರ ಶ್ರೇಯಸ್ ಅಯ್ಯರ್ ಮತ್ತು ರುತುರಾಜ್ ಗಾಯಕ್ವಾಡ್, ಬಳಿಕ ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್ ಮತ್ತು ತಿಲಕ್ ವರ್ಮಾ ಒಳಗೊಂಡ ಮಧ್ಯಮ ಕ್ರಮಾಂಕವು ಅಭ್ಯಾಸ ನಡೆಸಿದೆ. ಇಂದು ಎಲ್ಲ ಆಟಗಾರರು ಒಟ್ಟುಗೂಡಿ ಮತ್ತೊಮ್ಮೆ ಪ್ರ್ಯಾಕ್ಟೀಸ್ ನಡೆಸಲಿದ್ದಾರೆ.

ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಟಿ20 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ. ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 9:30ಕ್ಕೆ ಆರಂಭವಾಗಲಿದೆ.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ಹಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.









