T20 World Cup: 2013ರಿಂದಲೂ ಇದೇ ಕಥೆ; ಐಸಿಸಿ ಈವೆಂಟ್​ಗಳೆಂದರೆ ಟೀಂ ಇಂಡಿಯಾಕ್ಕೆ ಭಯ ಯಾಕೆ?

T20 World Cup 2022: ಐಸಿಸಿ ಟೂರ್ನಿಗಳಲ್ಲಿ ನಾಕೌಟ್‌ನಲ್ಲಿ ಸೋತು ಭಾರತ ಪ್ರಶಸ್ತಿ ವಂಚಿತವಾಗಿರುವುದು ಇದೇ ಮೊದಲಲ್ಲ. ಟೀಂ ಇಂಡಿಯಾ ತನ್ನ ಕೊನೆಯ ಐಸಿಸಿ ಟ್ರೋಫಿಯನ್ನು 2013 ರಲ್ಲಿ ಎತ್ತಿಹಿಡಿದಿತ್ತು.

TV9 Web
| Updated By: ಪೃಥ್ವಿಶಂಕರ

Updated on: Nov 10, 2022 | 5:44 PM

ಐಸಿಸಿ ಟಿ20 ವಿಶ್ವಕಪ್-2022ರಿಂದ ಭಾರತ ಕ್ರಿಕೆಟ್ ತಂಡ ಹೊರಬಿದ್ದಿದೆ. ಗುರುವಾರ ಅಡಿಲೇಡ್‌ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದೆ. ಈ ಮೂಲಕ ಮತ್ತೊಮ್ಮೆ ಐಸಿಸಿ ಟ್ರೋಫಿ ಎತ್ತುವ ಅವಕಾಶವನ್ನು ಟೀಂ ಇಂಡಿಯಾ ಕಳೆದುಕೊಂಡಿದೆ. ಆದರೆ, ಐಸಿಸಿ ಟೂರ್ನಿಗಳಲ್ಲಿ ನಾಕೌಟ್‌ನಲ್ಲಿ ಸೋತು ಭಾರತ ಪ್ರಶಸ್ತಿ ವಂಚಿತವಾಗಿರುವುದು ಇದೇ ಮೊದಲಲ್ಲ. ಟೀಂ ಇಂಡಿಯಾ ತನ್ನ ಕೊನೆಯ ಐಸಿಸಿ ಟ್ರೋಫಿಯನ್ನು 2013 ರಲ್ಲಿ ಎತ್ತಿಹಿಡಿದಿತ್ತು. ಅಂದಿನಿಂದ, ಐಸಿಸಿ ಟೂರ್ನಮೆಂಟ್‌ಗಳ ನಾಕೌಟ್‌ನಲ್ಲಿ ಟೀಮ್ ಇಂಡಿಯಾ ಎಷ್ಟು ಬಾರಿ ವಿಫಲವಾಗಿದೆ ಎಂಬುದರ ಪೂರ್ಣ ವಿವರ ಇಲ್ಲಿದೆ.

1 / 7
2013 ರಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ಟೀಮ್ ಇಂಡಿಯಾ ಮುಂದಿನ ವರ್ಷ ಅಂದರೆ 2014 ರಲ್ಲಿ T20 ವಿಶ್ವಕಪ್‌ನ ಫೈನಲ್ ತಲುಪಿತು. ಆದರೆ, ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಟೀಂ ಇಂಡಿಯಾಕ್ಕೆ ಪ್ರಶಸ್ತಿ ಗೆಲ್ಲಲಾಗಲಿಲ್ಲ. ಶ್ರೀಲಂಕಾ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಮೊದಲ ಪ್ರಶಸ್ತಿಯನ್ನು ಗೆದ್ದುಕೊಂಡಿತು.

2 / 7
2015ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿತ್ತು. ಆದರೆ ಆತಿಥೇಯ ತಂಡ ಸುಲಭವಾಗಿ ಗೆದ್ದುಬೀಗಿತ್ತು.

3 / 7
ಇದರ ನಂತರ, ಭಾರತ 2016 ರಲ್ಲಿ ಟಿ20 ವಿಶ್ವಕಪ್ ಅನ್ನು ಆಯೋಜಿಸಿತ್ತು. ಈ ಪಂದ್ಯಾವಳಿಯಲ್ಲಿ ಭಾರತವು ಗೆಲುವಿಗೆ ಪ್ರಬಲ ಸ್ಪರ್ಧಿಯಾಗಿತ್ತು. ಆದರೆ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್‌ ಎದುರು ಸೋತು ಟೂರ್ನಿಯಿಂದ ಹೊರಬಿದ್ದಿತು. ವೆಸ್ಟ್ ಇಂಡೀಸ್ ಮತ್ತೊಮ್ಮೆ ಫೈನಲ್ ಗೆದ್ದು ವಿಶ್ವಕಪ್ ಎತ್ತಿಹಿಡಿದಿತ್ತು.

4 / 7
ಮುಂದಿನ ವರ್ಷ ಅಂದರೆ 2017ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಪಾಕಿಸ್ತಾನದ ಎದುರು ಮುಗ್ಗರಿಸಿದ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವನ್ನು ಕೈಚೆಲ್ಲಿತ್ತು.

5 / 7
2019ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತ್ತು. ಈ ಬಾರಿ ನ್ಯೂಜಿಲೆಂಡ್, ಟೀಂ ಇಂಡಿಯಾದ ಫೈನಲ್ ಹಾದಿಗೆ ಮುಳುವಾಯಿತು.

6 / 7
ಇದಾದ ಬಳಿಕ 2022ರಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿತ್ತು. ಈ ಬಾರಿ ತಂಡವು 15 ವರ್ಷಗಳ ಬರ ನೀಗಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂಗ್ಲೆಂಡ್ ರೋಹಿತ್ ಪಡೆಯನ್ನು 10 ವಿಕೆಟ್‌ಗಳಿಂದ ಸೋಲಿಸಿ ಪಂದ್ಯಾವಳಿಯಿಂದ ಹೊರದಬ್ಬಿದೆ.

7 / 7
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ