Team India: ಭಾರತದಲ್ಲಿ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jan 15, 2024 | 2:21 PM

Team India: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು.

1 / 7
ಅಫ್ಘಾನಿಸ್ತಾನ್ ವಿರುದ್ಧದ 2ನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿದೆ.

2 / 7
ವಿಶೇಷ ಎಂದರೆ ಈ ಸರಣಿ ಗೆಲುವಿನೊಂದಿಗೆ ತವರಿನಲ್ಲಿ ಸತತ 15 ಟಿ20 ಸರಣಿಗಳನ್ನು ಗೆದ್ದ ವಿಶೇಷ ದಾಖಲೆಯೊಂದನ್ನು ಟೀಮ್ ಇಂಡಿಯಾ ನಿರ್ಮಿಸಿದೆ. ಅಂದರೆ ಕಳೆದ 4 ವರ್ಷಗಳಿಂದ ಭಾರತ ತಂಡವು ತವರಿನಲ್ಲಿ ಯಾವುದೇ ಟಿ20 ಸರಣಿ ಸೋತಿಲ್ಲ.

3 / 7
2019 ರಿಂದ ಶುರುವಾದ ಟಿ20 ಸರಣಿ ಗೆಲುವಿನ ನಾಗಾಲೋಟ ಈಗಲೂ ಮುಂದುವರೆದಿದ್ದು, ಈ ಮೂಲಕ ತವರಿನಲ್ಲಿ ಸತತ 15 ಸರಣಿಗಳನ್ನು ಗೆದ್ದ ವಿಶ್ವದ ಏಕೈಕ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

4 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಕಾಂಗರೂ ಪಡೆ 2006 ರಿಂದ 2010ರವರೆಗೆ ತವರಿನಲ್ಲಿ ಸತತ 8 ಟಿ20 ಸರಣಿಗಳನ್ನು ಗೆದ್ದುಕೊಂಡಿತ್ತು.

5 / 7
ಹಾಗೆಯೇ ಸೌತ್ ಆಫ್ರಿಕಾ ತಂಡವು 2007 ರಿಂದ 2010ರವರೆಗೆ ತವರಿನಲ್ಲಿ ಸತತ 7 ಟಿ20 ಸರಣಿಗಳಲ್ಲಿ ಜಯ ಸಾಧಿಸಿತ್ತು. ಇದಾದ ಬಳಿಕ ಯಾವುದೇ ತಂಡ ಸತತವಾಗಿ ತವರಿನಲ್ಲಿ 10 ಸರಣಿಗಳನ್ನು ಗೆದ್ದುಕೊಂಡಿಲ್ಲ.

6 / 7
ಇತ್ತ ಭಾರತದಲ್ಲಿ 2019 ರಿಂದ 2023 ರವರೆಗೆ ಸತತ 15 ಟಿ20 ಟ್ರೋಫಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಅಲ್ಲದೆ ಇದೇ ಹುಮ್ಮಸ್ಸಿನಲ್ಲಿ ಈ ಬಾರಿ ಟಿ20 ವಿಶ್ವಕಪ್​ ಅನ್ನು ಕೂಡ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

7 / 7
ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 172 ರನ್​ ಕಲೆಹಾಕಿತು. ಅದರಂತೆ 173 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (68) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ (63) ಅರ್ಧಶತಕ ಬಾರಿಸಿದರು. ಈ ಮೂಲಕ 15.4 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್​ಗಳಿಸಿ ಟೀಮ್ ಇಂಡಿಯಾ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.