AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ 400 ಸಿಕ್ಸರ್; ಟಿ20 ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ವಿಶ್ವದಾಖಲೆ

ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ 400 ಟಿ20 ಅಂತಾರಾಷ್ಟ್ರೀಯ ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ಮೊದಲ ತಂಡವಾಗಿ ಟೀಂ ಇಂಡಿಯಾ ಹೊರಹೊಮ್ಮಿದೆ. ಈ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆ ಭಾರತದ ಬ್ಯಾಟಿಂಗ್ ಶಕ್ತಿಯನ್ನು ಎತ್ತಿ ತೋರಿಸುತ್ತದೆ.

ಪೃಥ್ವಿಶಂಕರ
|

Updated on: Nov 01, 2026 | 3:58 PM

Share
ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 400 ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ(PC-PTI).

1 / 5
ಭಾನುವಾರ ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಈ ವಿಶೇಷ ಮೈಲಿಗಲ್ಲು ತಲುಪಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ಒಟ್ಟು 11 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ 400 ಸಿಕ್ಸರ್‌ಗಳ ಗಡಿ ದಾಟಿದರು(PC-PTI).

2 / 5
ಈ ವರ್ಷ ಆಡಿರುವ 40 ಅಂತಾರಾಷ್ಟ್ರೀಯ ಟಿ20  ಪಂದ್ಯಗಳಲ್ಲಿ ಭಾರತ ಒಟ್ಟು 400 ಸಿಕ್ಸರ್‌ಗಳನ್ನು ಬಾರಿಸಿದೆ. ಈ ಪಟ್ಟಿಯಲ್ಲಿ ಭಾರತಕ್ಕೆ ಹೋಲಿಸಿದರೆ ಆಸ್ಟ್ರಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಬಹಳ ಹಿಂದಿವೆ. ಆಸ್ಟ್ರಿಯಾ 24 ಪಂದ್ಯಗಳಲ್ಲಿ 224 ಸಿಕ್ಸರ್ ಸಿಡಿಸಿದ್ದರೆ, ವೆಸ್ಟ್ ಇಂಡೀಸ್ 21 ಪಂದ್ಯಗಳಲ್ಲಿ 224 ಸಿಕ್ಸರ್‌ಗಳನ್ನು ಬಾರಿಸಿದೆ(PC-PTI).

3 / 5
ಇನ್ನು ಈ ವರ್ಷ ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲೇ ಭಾರತ 142 ಸಿಕ್ಸರ್‌ಗಳನ್ನು ಸಿಡಿಸಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ ನಿರ್ದಿಷ್ಟ ಎದುರಾಳಿ ತಂಡದ ವಿರುದ್ಧ ಬಾರಿಸಿದ ಅತಿ ಹೆಚ್ಚು ಸಿಕ್ಸರ್‌ಗಳ ದಾಖಲೆಯೂ ಇದಾಗಿದೆ(PC-PTI).

4 / 5
ಭಾರತದ ಪರ ಸಿಕ್ಸರ್ ಸಿಡಿಸುವಲ್ಲಿ ಅಭಿಷೇಕ್ ಶರ್ಮಾ ಮುಂಚೂಣಿಯಲ್ಲಿದ್ದಾರೆ. ಅವರು ಈ ವರ್ಷ ಒಟ್ಟು 86 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಇಶಾನ್ ಕಿಶನ್ 60 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಸಂಜು ಸ್ಯಾಮ್ಸನ್ 50 ಸಿಕ್ಸರ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಅರಮನೆ ಅಂಗಳದಲ್ಲಿ ಕನ್ನಡಾಂಬೆಗೆ ನಿತ್ಯವೂ ಪೂಜೆ; ಇತಿಹಾಸ ವಿವರಿಸಿದ ಅರ್ಚಕರು

ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ: ರ‍್ಯಾಲಿಯಲ್ಲಿ ಘಟಾನುಘಟಿ ನಾಯಕರು ಭಾಗಿ

ಹಿರೇಮಗಳೂರು ಕೋದಂಡರಾಮ ದೇಗುಲ: ನಿತ್ಯವೂ ಕನ್ನಡದಲ್ಲೇ ಪೂಜೆ, ಮಂತ್ರಘೋಷ!

ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಸಿದ್ದರಾಮಯ್ಯ

ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು

ಮೈಸೂರು:ಕನ್ನಡಾಂಬೆ ಭುವನೇಶ್ವರಿ ದೇಗುಲದ ಬಗ್ಗೆ ನಿಮಗೆಷ್ಟು ಗೊತ್ತು?

ಲವ್ ಮಾಡೋದು ಬಿಟ್ಟು ಆಟವಾಡು: ಸುದೀಪ್ ಎದುರಲ್ಲೇ ಸೌಂದರ್ಯಾಗೆ ಕಿರಣ್ ಟೀಕೆ

ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಬೆಳಗಾವಿಯಲ್ಲಿ ಕಳೆಗಟ್ಟಿದ ಕನ್ನಡ ಹಬ್ಬ
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಇಂದು ಈ ರಾಶಿಯವರಿಗೆ ಗಜಕೇಸರಿ ಯೋಗ!
ಗಾಂಧಿ ಹತ್ಯೆಯ ನಾಟಕದ ವೇಳೆ ನಿರ್ದೇಶಕರಿಗೆ ಮಸಿ ಬಳಿದ ಕೈ ಕಾರ್ಯಕರ್ತರು