IND vs ZIM: ಹರಾರೆಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ವೈರಲ್
TV9 Web | Updated By: Vinay Bhat
Updated on:
Aug 15, 2022 | 8:33 AM
ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ.
1 / 7
ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆಗೆ ತಲುಪಿದ್ದು ಅಭ್ಯಾಶ ಶುರು ಮಾಡಿದ್ದಾರೆ. ಹರಾರೆಯಲ್ಲಿ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶದಡಿಯಲ್ಲಿ ಆಟಗಾರರು ಪ್ರ್ಯಾಕ್ಟೀಸ್ ಮಾಡುತ್ತಿದ್ದಾರೆ. ಇದರ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.
2 / 7
ಇಂಜುರಿಯಿಂದ ಗುಣಮುಖರಾಗಿ ಕೆಎಲ್ ರಾಹುಲ್ (KL Rahul) ಕೂಡ ಫಿಟ್ ಆಗಿದ್ದು ಜಿಂಬಾಬ್ವೆ ವಿರುದ್ಧದ ಸರಣಿಗೆ ತಡವಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಬಿಸಿಸಿಐ ಇವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಶಿಖರ್ ಧವನ್ ಉಪ ನಾಯಕನಾಗಿದ್ದಾರೆ.
3 / 7
ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು.
4 / 7
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ ಮೂಲಕ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ.
5 / 7
ಐಸಿಸಿ ಸೂಪರ್ ಲೀಗ್ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ.
6 / 7
ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12:45ಕ್ಕೆ ಶುರುವಾಗಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ನಲ್ಲಿ ನೇರಪ್ರಸಾರ ಕಾಣಲಿದೆ.
7 / 7
ಭಾರತ ತಂಡ: ಕೆ ಎಲ್ ರಾಹುಲ್(ನಾಯಕ), ಶಿಖರ್ ಧವನ್(ಉಪ ನಾಯಕ), ಋತುರಾಜ್ ಗಾಯಕ್ವಾಡ, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮನ್ಸ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.
Published On - 8:33 am, Mon, 15 August 22