
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿ ಸರಣಿಯನ್ನು ಕ್ಲೀನ್ ಸ್ವೀಪ್ ಸಾಧನೆ ಗೈದ ಭಾರತ ಇದೀಗ ಹೊಡಿಬಡಿ ಕದನಕ್ಕೆ ಸಜ್ಜಾಗಿದೆ. ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಇಂದು ರಾಂಚಿಯ ಜೆಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ.

ಹಾರ್ದಿಕ್ ಪಾಂಡ್ಯ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಈಗಾಗಲೇ ಭಾರತೀಯ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಟೀಮ್ ಇಂಡಿಯಾ ಯುವ ಪಡೆ ಯಾವರೀತಿ ಪ್ರದರ್ಶನ ತೋರುತ್ತೆ ಎಂಬುದು ನೋಡಬೇಕಿದೆ.

ಭಾರತ ಪರ ಭರ್ಜರಿ ಫಾರ್ಮ್ನಲ್ಲಿರುವ ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಯುಜ್ವೇಂದ್ರ ಚಹಲ್ ಸ್ಥಾನ ಪಡೆಯಬಹುದು.

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ದಿಢೀರ್ ಆಗಿ ಕ್ರೀಡಾಂಗಣದಲ್ಲಿ ಪ್ರವೇಶಿಸಿ ಆಟಗಾರರಿಗೆ ಶಾಕ್ ನೀಡಿದರು. ಬಳಿಕ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ಗೆ ತೆರಳಿ ಆಟಗಾರರ ಜೊತೆ ಮಾತುಕತೆ ನಡೆಸಿದರು.

ಇತ್ತ ನ್ಯೂಜಿಲೆಂಡ್ ತಂಡ ಏಕದಿನ ಸರಣಿಯಲ್ಲಿ ಮುಖಭಂಗ ಅನುಭವಿಸಿದ್ದರೂ ಟಿ20 ಯಲ್ಲಿ ಬಲಿಷ್ಠವಾಗಿದೆ. ಕಿವೀಸ್ ಪಡೆಯನ್ನು ಮಿಚೆಲ್ ಸ್ಯಾಂಟ್ನರ್ ಮುನ್ನಡೆಸಲಿದ್ದಾರೆ. ನ್ಯೂಜಿಲೆಂಡ್ ಆಟಗಾರರು ಭರ್ಜರಿ ಅಭ್ಯಾಸ ನಡೆಸುತ್ತಿದ್ದಾರೆ.

ರಾಂಚಿಯ ಜೆಎಸ್‌ಸಿಎ ಸ್ಟೇಡಿಯಂನಲ್ಲಿ ಭಾರತ ಟಿ20 ಪಂದ್ಯಗಳ ದಾಖಲೆ ಉತ್ತಮವಾಗಿದೆ. ಇಲ್ಲಿಯವರೆಗೂ ಇಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಬ್ಲೂ ಬಾಯ್ಸ್ ಆಡಿದ 3 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಬೀಗಿದೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೊದಲ ಏಕದಿನ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಬಹುತೇಕ ಚಾನೆಲ್‌ಗಳಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ , ಪೃಥ್ವಿ ಶಾ, ಮುಖೇಶ್ ಕುಮಾರ್.
Published On - 10:13 am, Fri, 27 January 23