AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಿಂದ ಹೊರಬಿದ್ದ ಟೀಮ್ ಇಂಡಿಯಾ

WTC Final 2025: ಭಾರತ ತಂಡವು ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿದೆ. 2019-21 ರ ಸರಣಿಯಲ್ಲಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಮುಗ್ಗರಿಸಿತ್ತು. ಇನ್ನು 2021-23 ರ ಸರಣಿಯಲ್ಲಿ ಮತ್ತೆ ಫೈನಲ್​ ಆಡಿದ್ದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಇದೀಗ ಮೂರನೇ ಭಾರೀ ಫೈನಲ್​ಗೇರುವ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ.

ಝಾಹಿರ್ ಯೂಸುಫ್
|

Updated on:Jan 05, 2025 | 9:53 AM

ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವ ಟೀಮ್ ಇಂಡಿಯಾದ ಕನಸು ಕಮರಿದೆ. ಅದು ಕೂಡ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್​ ಟ್ರೋಫಿ ಸರಣಿಯನ್ನು 3-1 ಅಂತರದಿಂದ ಸೋಲುವ ಮೂಲಕ. ಸಿಡ್ನಿಯಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆದ್ದಿದ್ದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿ ಉಳಿದುಕೊಳ್ಳುತ್ತಿತ್ತು.

1 / 5
ಆದರೆ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವನ್ನು 6 ವಿಕೆಟ್​​ಗಳಿಂದ ಬಗ್ಗು ಬಡಿದು ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಆಡುವುದನ್ನು ಖಚಿತಪಡಿಸಿಕೊಂಡಿದೆ. ಇತ್ತ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಉಳಿದು ಕೊಂಡಿದೆ.

2 / 5
ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಭಾರತ ತಂಡವು 19 ಪಂದ್ಯಗಳನ್ನಾಡಿತ್ತು. ಈ ವೇಳೆ 8 ಜಯ ಹಾಗೂ 2 ಡ್ರಾಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ 6 ಪಂದ್ಯಗಳಲ್ಲಿ ಸೋಲುವ ಮೂಲಕ ಇದೀಗ ಫೈನಲ್​ ರೇಸ್​ನಿಂದ ಹೊರಬಿದ್ದಿದೆ.

3 / 5
ಅಲ್ಲದೆ 19 ಪಂದ್ಯಗಳಲ್ಲಿ 9 ಜಯ, 3 ಡ್ರಾ ಹಾಗೂ 8 ಸೋಲುಗಳೊಂದಿಗೆ 2023-25ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯನ್ನು ಅಂತ್ಯಗೊಳಿಸಿದೆ. ಈ ಮೂಲಕ ಸತತ ಮೂರನೇ ಬಾರಿ ಫೈನಲ್​ಗೇರುವ ಅವಕಾಶವನ್ನು ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ.

4 / 5
ಪ್ರಸ್ತುತ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಆಫ್ರಿಕಾ ತಂಡದ ಫೈನಲ್ ಆಡುವುದು ಖಚಿತವಾಗಿದೆ. ಇದೀಗ ಟೀಮ್ ಇಂಡಿಯಾ ಫೈನಲ್​ ರೇಸ್​ನಿಂದ ಹೊರಬಿದ್ದಿದ್ದರಿಂದ ಆಸ್ಟ್ರೇಲಿಯಾ ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಕನ್ಫರ್ಮ್ ಆಗಿದೆ. ಹೀಗಾಗಿ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ಮುಖಾಮುಖಿಯಾಗಲಿದೆ.

5 / 5

Published On - 9:52 am, Sun, 5 January 25

Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ

ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​

ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ